ಬೆಂಗಳೂರು: ಮದ್ದೂರು ಗಲಭೆಗೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳ ತಲೆದಂಡಕ್ಕೆ ಸರಕಾರ ಮುಂದಾಗಿದ್ದು, ಮಹತ್ವದ ತೀರ್ಮಾನ ತೆಗೆದುಕೊಂಡಿದೆ.
ಮದ್ದೂರು ಸರ್ಕಲ್ ಇನ್ಸ್ ಪೆಕ್ಟರ್ ಶಿವಕುಮಾರ್ ಅವರನ್ನು ಅಮಾನತು ಮಾಡಿರುವ ಗೃಹ ಇಲಾಖೆ, ಮಂಡ್ಯದ ASP ತಿಮ್ಮಯ್ಯ ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಆದರೆ, ತಿಮ್ಮಯ್ಯ ಅವರಿಗೆ ಯಾವುದೇ ಜಾಗ ತೋರಿಸದೆ ವರ್ಗಾವಣೆ ಮಾಡಲಾಗಿದೆ.
ASP ತಿಮ್ಮಯ್ಯ ವರ್ಗಾವಣೆಯಿಂದ ತೆರವಾದ ಜಾಗಕ್ಕೆ ನವೀನ್ ಕುಮಾರ್ ಎಂಬುವವರನ್ನು ನೇಮಿಸಿ ಆದೇಶಿಸಲಾಗಿದೆ. ಘಟನೆ ನಡೆದ ಸ್ಥಳದಲ್ಲಿ ಇರಲಿಲ್ಲ ಎಂಬ ಕಾರಣಕ್ಕೆ ಸರ್ಕಲ್ ಇನ್ಸ್ ಪೆಕ್ಟರ್ ಶಿವಕುಮಾರ್ ಅವರ ಅಮಾನತು ಮಾಡಲಾಗಿದೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.