ಕೋಲಾರ: ಇಂದು ಸೋಮವಾರ ಬೆಳ್ಳಂಬೆಳಗ್ಗೆ ಕೋಲಾರ ಎಪಿಎಂಸಿ ಮಾರುಕಟ್ಟೆಗೆ ಉಪಲೋಕಾಯುಕ್ತ ನ್ಯಾ. ಬಿ ವೀರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ದಲ್ಲಾಳಿಗಳ ಹಾವಳಿಯಿಂದ ರೈತರಿಗೆ ಯೋಗ್ಯ ಬೆಲೆ ಸಿಗುತ್ತಿಲ್ಲ ಹಾಗೂ ತೂಕದಲ್ಲಿ ಮೋಸ ಮಾಡಲಾಗುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಉಪಲೋಕಾಯುಕ್ತರು ಬೆಳ್ಳಂಬೆಳಗ್ಗೆ ಕೋಲಾರ ಎಪಿಎಂಸಿ ಮಾರುಕಟ್ಟೆ ರೇಡ್ ಮಾಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ, ಎಪಿಎಂಸಿ ಮಾರುಕಟ್ಟೆಯಲ್ಲಿ ಬಳಸುತ್ತಿದ್ದ ಹಳೆಯ ತೂಕ ಮಾಡುವ ಮಾಪನ ಕಂಡು ಉಪಲೋಕಾಯುಕ್ತರು ಸಿಡಿಮಿಡಿಗೊಂಡಿದ್ದಾರೆ.