ಹೊಸಕೋಟೆ: ಸಾಲಬಾಧೆಯಿಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿ ಮೂವರು ಸಾವನ್ನಪ್ಪಿರುವ ಘಟನೆ ಹೊಸಕೋಟೆ ತಾಲೂಕಿನ ಗೊಣಕನಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಅದೃಷ್ಟವಶಾತ್ ಓರ್ವ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಾಲಬಾಧೆಯಿಂದ ಹೆದರಿ ದಂಪತಿಯು ಇಬ್ಬರು ಮಕ್ಕಳನ್ನು ಸಾಯಿಸಿ ತಾವೂ ಆತ್ಮಹತ್ಯೆಯ ನಿರ್ಧಾರ ಮಾಡಿದ್ದರು. ಅಂತೆಯೇ ಇಬ್ಬರು ಮಕ್ಕಳನ್ನು ಸಾಯಿಸಿ ತಾವೂ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪತಿ, ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಮಹಿಳೆ ಬದುಕುಳಿದಿದ್ದಾರೆ.
ಶಿವು (32), ಮಗಳು ಚಂದ್ರಕಳಾ (11), ಮಗ ಉದಯ್ ಸೂರ್ಯ (7) ಮೃತರಾಗಿದ್ದಾರೆ. ಶಿವು ಪತ್ನಿ ಮಂಜುಳಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಹಿಳೆಗೆ ಹೊಸಕೋಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಸಂಬAಧ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವು ಅಪಘಾತದಲ್ಲಿ ಗಾಯಗೊಂಡಿದ್ದರು, ಅವರ ಚಿಕಿತ್ಸೆಗಾಗಿ ಸಾಲ ಮಾಡಿಕೊಂಡಿದ್ದರು. ಸಾಲ ಹೆಚ್ಚಾಗಿ ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ ನಿರ್ಧಾರ ಮಾಡಿದ್ದಾರೆ. ನಾವು ಸತ್ತರೆ ಮಕ್ಕಳು ತಬ್ಬಲಿಗಳಾಗುತ್ತಾರೆ ಅಂತ ಮಕ್ಕಳನ್ನು ಸಾಯಿಸುವ ನಿರ್ಧಾರ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮನೆಯಲ್ಲಿ ಆಗಾಗ ಜಗಳ ಆಗ್ತಾ ಇತ್ತು. ಮತ್ತು ಸಾಲಬಾಧೆಯು ಇತ್ತು. ಇದರಿಂದಾಗಿ ದಂಪತಿಯು ಮಕ್ಕಳನ್ನು ಸಾಯಿಸಿ ತಾವೂ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದರು. ಮೊದಲು ಮಕ್ಕಳನ್ನ ಸಾಯಿಸಿದ್ದರು. ಬಳಿಕ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆದರೆ ಈ ವೇಳೆ ಹಗ್ಗ ಹರಿದು ಅದೃಷ್ಟವಶಾತ್ ಪತ್ನಿ ಬದುಕುಳಿದಿದ್ದಾರೆ. ಈ ವೇಳೆಗ ನೆರೆಹೊರೆಗೆ ಗೊತ್ತಾಗಿದೆ. ಸದ್ಯ ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ ಎಂದು ಹೊಸಕೋಟೆ ಉಪವಿಭಾಗದ ಡಿವೈಎಸ್ಪಿ ಮಲ್ಲೇಶ್ ಮಾಹಿತಿ ನೀಡಿದ್ದಾರೆ.