ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೈಲಿನ ಅಧಿಕಾರಿಗಳು ಕೆಲಸ ಹಂಚಿಕೆ ಮಾಡಿದ್ದು, ಕಾರಾಗೃಹದಲ್ಲಿರುವ ಗ್ರಂಥಾಲಯದಲ್ಲಿ ಕ್ಲರ್ಕ್ ಕೆಲಸ ನೀಡಲಾಗಿದೆ.
ವಿಚಾರಣಾಧೀನ ಕೈದಿಗಳು ಹಾಗೂ ಸಜಾಬಂದಿಗಳಿಗೆ ಜೈಲಿನ ಗ್ರಂಥಾಲಯದಿಂದ ಪುಸ್ತಕ ವಿತರಣೆ ಮಾಡುವುದು, ಯಾವ ಕೈದಿಗೆ ಯಾವ ಪುಸ್ತಕ ನೀಡಲಾಗಿದೆ ಎಂಬುದನ್ನು ಪುಸ್ತಕದಲ್ಲಿ ನೋಂದಣಿ ಮಾಡಿಕೊಳ್ಳುವ ಕೆಲಸವನ್ನು ಪ್ರಜ್ವಲ್‌ಗೆ ನೀಡಲಾಗಿದೆ. ಕ್ಲರ್ಕ್ ಕೆಲಸಕ್ಕೆ ಪ್ರತಿದಿನಕ್ಕೆ ರೂ.524 ಕೂಲಿ ನಿಗದಿಪಡಿಸಲಾಗಿದೆ.
ನೋಂದಣಿ ಮಾಡಿಕೊಂಡು ಕೆಲಸ ಮಾಡಿದ ದಿನದಂದು ಕೂಲಿ ಬರಲಿದೆ. ನ್ಯಾಯಾಲಯಕ್ಕೆ ಹಾಜರಾಗಬೇಕಾದ ದಿನಗಳಂದು ಹಣ ನೀಡಲಾಗುವುದಿಲ್ಲ ಎಂದು ಜೈಲಿನ ಮೂಲಗಳು ತಿಳಿಸಿವೆ.