ನಮ್ಮ ಮೆಟ್ರೋದಲ್ಲಿ ಕನ್ನಡಗರಿಗೆ ಕೆಲಸ : BMRCL ಗೆ ಪ್ರಾಧಿಕಾರದ ಖಡಕ್ ಸೂಚನೆ
ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಮತ್ತಷ್ಟು ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಸೂಚನೆ ನೀಡಿದ್ದಾರೆ.
BMRCL ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ್ ರಾವ್ ಅವರಿಗೆ ಪತ್ರ ಬರೆದಿರುವ ಡಾ. ಪುರುಷೋತ್ತಮ ಬಿಳಿಮನೆ, ತಾಂತ್ರಿಕ ಮತ್ತು ತಾಂತ್ರಿಕೇತರ ಸಿಬ್ಬಂದಿ ನೇಮಕದಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಬೇಕು. ಈಗಾಗಲೇ ನೇಮಕವಾಗಿರುವ ಪರಭಾಷಿಕ ಸಿಬ್ಬಂದಿಗೆ ಕನ್ನಡ ಕಲಿಸುವ ಕಾರ್ಯಾಗಾರ ಆಯೋಜನೆ ಮಾಡಬೇಕು. ಇಲ್ಲವಾದಲ್ಲಿ ಪ್ರಾಧಿಕಾರ ಅಧಿಕಾರಿಗಳ ಜತೆಗೆ ಬಂದು ಪರಿಶೀಲನೆ ನಡೆಸಲು ತೀರ್ಮಾನಿಸಿದೆ.
ಮಾ.12 ರಂದು ಮೆಟ್ರೋ ತನ್ನ ಸಿಬ್ಬಂದಿ ನೇಮಕಕ್ಕೆ ಅಧಿಸೂಚನೆ ಹೊರಡಿಸಿದೆ. ಇದರಲ್ಲಿ ಕನ್ನಡ ಭಾಷೆಯನ್ನು ಓದಲು, ಬರೆಯಲು ಅಥವಾ ಅರ್ಥ ಮಾಡಿಕೊಳ್ಳಲು ಬರಬೇಕು ಎಂಬ ಷರತ್ತು ವಿಧಿಸಲಾಗಿದೆ. ಅದಾಗ್ಯೂ, ಹುದ್ದೆ ನೇಮಕ ಮಾಡುವಾಗ ಕನ್ನಡಿಗರಿಗೆ ಆದ್ಯತೆ ನೀಡಬೇಕು. ಇಲ್ಲವಾದಲ್ಲಿ ಪ್ರಧಿಕಾರ ಕ್ರಮ ಕೈಗೊಳ್ಳಲಿದೆ ಎಂದು ಡಾ. ಬಿಳಿಮಲೆ ಎಚ್ಚರಿಕೆ ನೀಡಿದ್ದಾರೆ.

