ಅಪರಾಧ ಸುದ್ದಿ

ರಾಜ್ಯದ 69 ಕಡೆ ಲೋಕಾಯುಕ್ತ ದಾಳಿ: ಭ್ರಷ್ಟರ ನಡುಗಿಸಿದ ಕಾರ್ಯಾಚರಣೆ

Share It

ಬೀದರ್: ಬೀದರ್​​ನ ಪಶುವೈದ್ಯಕೀಯ ಮೀನುಗಾರಿಕೆ ವಿಜ್ಞಾನಿಗಳ ವಿವಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪ ಸಂಬಂಧ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬೆಳಗ್ಗೆ ಏಕಕಾಲದಲ್ಲಿ ರಾಜ್ಯದ 69 ಕಡೆಗಳಲ್ಲಿ ದಾಳಿ ನಡೆಸಿದ್ದಾರೆ.

ವಿವಿ ಅಧಿಕಾರಿಗಳು, ಸಿಬ್ಬಂದಿ ಮನೆಗಳು, ಕಚೇರಿಗಳ ಮೇಲೆ ದಾಳಿ ನಡೆದಿದೆ. ಭ್ರಷ್ಟಾಚಾರ ಆರೋಪ ಸಂಬಂಧ ಬೀದರ್ ಲೋಕಾಯುಕ್ತ ಕಚೇರಿಯಲ್ಲಿ ದೂರು ದಾಖಲಾಗಿತ್ತು. ಬೆಂಗಳೂರು ಮೂಲದ ವೆಂಕಟ್ ರೆಡ್ಡಿ ಎಂಬುವರು ದೂರು ನೀಡಿದ್ದರು.

2021 ರಲ್ಲಿ ವಿವಿ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸಿದ ಅಧಿಕಾರಿಗಳು, ಸಿಬ್ಬಂದಿ ಮನೆಗಳು, ಕಚೇರಿಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ಲೋಕಾಯುಕ್ತ ಎಡಿಜಿಪಿ ಮನೀಶ್ ಕರ್ಬಿಕರ್, ಐಜಿ ಮಾರ್ಗದರ್ಶನದಲ್ಲಿ ದಾಳಿ ನಡೆದಿದೆ.

ಬೀದರ್ ಜಿಲ್ಲೆಯ 24 ಕಡೆ, ಬೆಂಗಳೂರಿನ 31 ಕಡೆ, ಕೊಪ್ಪಳ 2 ಕಡೆ, ಚಿಕ್ಕಮಗಳೂರು ಜಿಲ್ಲೆಯ 2 ಕಡೆ, ಹಾಸನ, ರಾಮನಗರ, ಕೋಲಾರ, ಉಡುಪಿ ಸೇರಿ ರಾಜ್ಯಾದ್ಯಂತ 69 ಕಡೆ ದಾಳಿ ನಡೆಸಿ ಶೋಧ ಕಾರ್ಯ ಕೈಗೊಳ್ಳಲಾಗಿದೆ.

2021 ಅಕ್ಟೋಬರ್ 4ರಂದು 35 ಕೋಟಿ ರೂ. ಹಗರಣ ನಡೆದಿದೆ ಎಂದು ದೂರಿನಲ್ಲಿ ದೂರುದಾರರು ಉಲ್ಲೇಖಿಸಿದ್ದರು. ಈ ಸಂಬಂಧ ಲೋಕಾಯುಕ್ತ ನಡೆಸಿದ ತನಿಖೆಯಲ್ಲಿ, 22 ಕೋಟಿ ಹಗರಣ ನಡೆದಿರುವುದು ಪತ್ತೆಯಾಗಿತ್ತು.


Share It

You cannot copy content of this page