ಅಪರಾಧ ರಾಜಕೀಯ ಸುದ್ದಿ

ಪ್ರಜ್ವಲ್ ಪ್ರಕರಣ: ಇನ್ನೆರಡು ಪ್ರಕರಣಗಳಲ್ಲಿ ನ್ಯಾಯಾಲಯ ಬದಲಾವಣೆಗೆ ಮನವಿ

Share It

ಬೆಂಗಳೂರು: ಅತ್ಯಾಚಾರ ಆರೋಪದ ಕ್ರಿಮಿನಲ್ ಪ್ರಕರಣಗಳನ್ನು ಜನಪ್ರತಿನಿಧಿಗಳ ಸೆಷನ್ಸ್ ಕೋರ್ಟ್ನಿಂದ ಮತ್ತೊಂದು ಸೆಷನ್ಸ್ ಕೋರ್ಟ್ಗೆ ವರ್ಗಾಯಿಸಬೇಕು ಎಂದು ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ಗಳ ಪ್ರಧಾನ ನ್ಯಾಯಾಧೀಶರಿಗೆ ಮನವಿ ಮಾಡಿದ್ದಾರೆ.

ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಈಗಾಗಲೇ ನನ್ನ ವಿರುದ್ಧ ಒಂದು ಪ್ರಕರಣದಲ್ಲಿ ನೀಡಿರುವ ತೀರ್ಪಿನಲ್ಲಿ ನನ್ನ ವಿರುದ್ಧ ಪೂರ್ವಗ್ರಹ ಭಾವನೆ ಹೊಂದಿರುವ ಅಂಶಗಳನ್ನು ವ್ಯಕ್ತಪಡಿಸಿದ್ದಾರೆ. ಇದು ಅವರ ಅನ್ಯಾಯದ ಧೋರಣೆಯನ್ನು ಪ್ರತಿಬಿಂಬಿಸುತ್ತದೆ.

ಆದ್ದರಿಂದ ಅಪರಾಧ ದಂಡ ಪ್ರಕ್ರಿಯಾ ಸಂಹಿತೆ-೧೯೭೩ರ (ಸಿಆರ್‌ಪಿಸಿ) ಕಲಂ ೪೦೮ರ ಅಡಿಯಲ್ಲಿ ಸದ್ಯ ನಡೆಯುತ್ತಿರುವ ಮತ್ತೆರಡು ಪ್ರಕರಣಗಳ ವಿಚಾರಣೆಯನ್ನು ನಗರದ ಮತ್ತೊಂದು ಸೆಷನ್ಸ್ ಕೋರ್ಟ್ಗೆ ವರ್ಗಾವಣೆ ಮಾಡಲು ಆದೇಶಿಸಬೇಕು ಎಂದು ಕೋರಿದ್ದಾರೆ.

ಪ್ರಜ್ವಲ್ ರೇವಣ್ಣ ಪರ ಹೈಕೋರ್ಟ್ ವಕೀಲ ಬಿ.ಎಂ.ಗಿರೀಶ್ ಕುಮಾರ್ ಈ ಕುರಿತಾದ ಮನವಿಯನ್ನು ಗುರುವಾರ ಸಲ್ಲಿಸಿದ್ದಾರೆ.


Share It

You cannot copy content of this page