ಅಪರಾಧ ಸುದ್ದಿ

Belagavi: ಕರಡಿ ದಾಳಿ: ಹೊಸದಲ್ಲಿ ಕೆಲಸ ಮಾಡುತ್ತಿದ್ದ ರೈತನಿಗೆ ಗಾಯ

Share It

ಬೆಳಗಾವಿ: ಕಣಕುಂಬಿ ಅರಣ್ಯ ವಲಯದ ಹುಳಂದ ಗ್ರಾಮದ ಹೊರವಲಯದಲ್ಲಿ ಭಾನುವಾರ ಕೃಷಿ ಕೆಲಸ ಮುಗಿಸಿ ಮನೆಗೆ ಹೊರಟಿದ್ದ ರೈತರೊಬ್ಬರ ಮೇಲೆ ಕರಡಿ ದಾಳಿ ನಡೆಸಿದ ಘಟನೆ ನಡೆದಿದೆ.

ಹುಳಂದ ಗ್ರಾಮದ ರೈತ ವಾಸುದೇವ ನಾರಾಯಣ ಗಾವಡೆ ಎಂಬುವರು ಕರಡಿ ದಾಳಿಯಿಂದ ಗಾಯಗೊಂಡ ರೈತ.

ವಾಸುದೇವ ಅವರ ಮೇಲೆ ದಾಳಿ ನಡೆಸಿದ ಕರಡಿ ಅವರ ಹೊಟ್ಟೆ, ಮುಖಕ್ಕೆ ಪರಚಿ ಗಾಯಗೊಳಿಸಿದೆ.

ಕರಡಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡು ನಿತ್ರಾಣರಾಗಿದ್ದ ಅವರನ್ನು ಸ್ಥಳೀಯರ ನೆರವಿನೊಂದಿಗೆ ಆಂಬುಲೆನ್ಸ್ ಮೂಲಕ ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಎಂದು ಕಾಂಗ್ರೆಸ್ ಮುಖಂಡ ಸುರೇಶ ಜಾಧವ ಮಾಹಿತಿ ನೀಡಿದ್ದಾರೆ.

ಜಿಲ್ಲಾಸ್ಪತ್ರೆಗೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುನೀತಾ ನಿಂಬರಗಿ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಭೇಟಿ ನೀಡಿದರು. ಕಣಕುಂಬಿ ವಲಯ ಅರಣ್ಯಾಧಿಕಾರಿಗಳ ಕಚೇರಿಯಲ್ಲಿ ಪ್ರಕರಣ ದಾಖಲಾಗಿದೆ.


Share It

You cannot copy content of this page