ಕಾಳಸಂತೆಯಲ್ಲಿ ಅಕ್ಕಿ ಮಾರಾಟ: ಕಾಂಗ್ರೆಸ್ ಮತ್ತು KRS ಕಾರ್ಯಕರ್ತರ ನಡುವೆ ಮಾರಾಮಾರಿ
ಬೆಂಗಳೂರು: ಕಾಳಸಂತೆಯಲ್ಲಿ ಅನ್ನಭಾಗ್ಯದ ಅಕ್ಕಿ ಮಾರಾಡ ಮಾಡುತ್ತಿದ್ದಾರೆ ಎಂಬ ಆರೋಪದಡಿ ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ದಾಳಿ ಮಾಡಿದ ವೇಳೆ ಕೈ ಕಾರ್ಯಕರ್ತರ ಜತೆಗೆ ಮಾರಾಮಾರಿ ನಡೆದಿದೆ.
ಈ ವೇಳೆ ಕಾಂಗ್ರೆಸ್ ಮುಖಂಡ ಹಮೀಮ್ ಎಂಬಾತ ಕೆಆರ್ ಎಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಕೆ.ಆರ್.ಎಸ್. ಪಕ್ಷದ ಕಾರ್ಯಕರ್ತರು ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ದೂರು ಸ್ವೀಕಾರ ಮಾಡಿರುವ ಪೊಲೀಸರು, ಹಮೀಮ್ ವಿರುದ್ಧ ಎಫ್ ಐಆರ್ ದಾಖಲು ಮಾಡಿದ್ದಾರೆ ಎಂದು ಹೇಳಲಾಗಿದೆ.
Updating….


