ರಾಜಕೀಯ ಸುದ್ದಿ

ಕೆನರಾ ಬ್ಯಾಂಕ್ ನಿವೃತ್ತ ಅಧಿಕಾರಿಗಳ ಸಮ್ಮೇಳನ ಉದ್ಘಾಟಿಸಿದ ಡಾ. ಸಿ.ಎನ್. ಮಂಜುನಾಥ್

Share It

ಬೆಂಗಳೂರು: ಕೆನರಾ ಬ್ಯಾಂಕ್ ನಿವೃತ್ತ ಅಧಿಕಾರಿಗಳ ಸಂಘದ 13 ನೇ ತ್ರೈವಾರ್ಷಿಕ ಸಮ್ಮೇಳನವನ್ನು ಬೆಂಗಳೂರಿನ ನಿಮ್ಹಾನ್ಸ್ ಕನ್ವೆನ್ಷನ್ ಸೆಂಟರ್‌ನಲ್ಲಿ  ಖ್ಯಾತ ಹೃದ್ರೋಗ ತಜ್ಞ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸತ್ ಸದಸ್ಯ ಡಾ. ಸಿ. ಎನ್. ಮಂಜುನಾಥ್ ಅವರು ಉದ್ಘಾಟನೆ ಮಾಡಿದರು.

ಕೆನರಾ ಬ್ಯಾಂಕಿನ  ಕಾರ್ಯನಿರ್ವಾಹಕ ನಿರ್ದೇಶಕರಾದ ಎಸ್ ಕೆ ಮಜುಂದಾರ್ , ಕೆನರಾ ಬ್ಯಾಂಕಿನ ಮಾನವ ಸಂಪನ್ಮೂಲಗಳು ವಿಭಾಗದ  ಮಹಾಪ್ರಬಂಧಕ ಕೆ ವಿ ರಮಣ ಮೂರ್ತಿ, ಕೆನರಾ ಬ್ಯಾಂಕ್ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಕೆ. ರವಿ ಕುಮಾರ್, ಕೆನರಾ ಬ್ಯಾಂಕ್ ಅಧಿಕಾರಿಗಳ ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ ಸುಧಾಕರ್ ಶೆಟ್ಟಿ , ಸಂಘದ ಪ್ರಧಾನ ಕಾರ್ಯದರ್ಶಿ ಜೆ ಎಸ್ ಜಗದೀಶ್ ಉಪಸ್ಥಿತರಿದ್ದರು.


Share It

You cannot copy content of this page