ಬೆಂಗಳೂರು: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ವ್ಯಾಪ್ತಿಯ ವಿವಿಧ ನಾಲೆಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.
ತಾಲೂಕಿನ ವಿರಿಜಾ, ದೇವರಾಯ, ಆರ್.ಬಿ.ಎಲ್.ಎಲ್ ಮತ್ತು ಬಂಗಾರದೊಡ್ಡಿ ನಾಲೆಗಳ ವಿತರಣಾ ನಾಲೆಗಳ ಅಭಿವೃದ್ಧಿ ಕಾಮಗಾರಿಗೆ 60 ಕೋಟಿ. ರುಪಾಯಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಯಿತು.
ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಯಲ್ಲಿ ಕಾಮಗಾರಿ ಮಡೆಯಲಿದ್ದು, ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಈ ಯೋಜನೆ ಜಾರಿಗೊಂಡಿದೆ. ಬಜರಟ್ ನಲ್ಲಿ ಮತ್ತಷ್ಟು ಅನುದಾನ ಮೀಸಲಿಟ್ಟು, ಮುಂದೆ ಮತ್ತಷ್ಟು ನೀರಾವರಿ ಯೋಜನೆಗಳನ್ನು ಅಭಿವೃದ್ಧಿಗೊಳಿಸಲು ತೀರ್ಮಾನಿಸಿದೆ.

