ಬೆಂಗಳೂರು: ವಕ್ಫ್ ನೋಟಿಸ್ ವಿರುದ್ಧ ಬಿಜೆಪಿ ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತಿದರ.
ಕೋಲಾರದಿಂದ ಮಂಗಳೂರಿನವರೆಗೆ, ಬೆಂಗಳೂರಿನಿಂದ ವಿಜಯಪುರದವರೆಗ ವಕ್ಫ್ ವಿವಾದ ವಿರೋಧಿಸಿ ಪ್ರತಿಭಟನೆ ಮಾಡಲಾಗುತ್ತಿದೆ.
ಕೂಡಲೇ ಗೆಜೆಟ್ ನೋಟಿಫಿಕೇಷನ್ ರದ್ದು ಮಾಡಬೇಕು ಎಂದು ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ.
ರೈತರ ಜಮೀನು, ದೇವಸ್ಥಾನ ಸೇರಿದಂತೆ ಹಲವು ಆಸ್ತಿಗಳಲ್ಲಿ ವಕ್ಫ್ ಬೋರ್ಡ್ ಆಸ್ತಿ ಅಂತಾ ನಮೂದಾಗುತ್ತಿರುವುದನ್ನು ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಮ್ಮ ಭೂಮಿ ನಮ್ಮ ಹಕ್ಕು ಘೋಷಣೆಯಡಿ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಲಾಯಿತು. ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಿಜೆಪಿ ನಾಯಕರು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.