ಸಚಿವ ರಾಮಲಿಂಗಾ ರೆಡ್ಡಿ ಅವರಿಂದ ಮಹತ್ವದ ಘೋಷಣೆ
ಬೆಂಗಳೂರು: ಆರ್‌ಟಿಒ ವ್ಯವಸ್ಥೆಯನ್ನು ಮತ್ತಷ್ಟು ಅಪ್ಡೇಟ್ ಮಾಡಲು ಸರಕಾರ ತೀರ್ಮಾನಿಸಿದ್ದು, ಸಚಿವ ರಾಮಲಿಂಗಾ ರೆಡ್ಡಿ ಅವರ ನೇತೃತ್ವದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತರಲು ಮುಂದಾಗಿದೆ.
ರಾಜ್ಯದ ವಿವಿಧ ಕಡೆಗಳಲ್ಲಿ 43 ನೂತನ ಸ್ವಯಂಚಾಲಿತ ಡ್ರೈವಿಂಗ್ ಟೆಸ್ಟ್ ಟ್ರ‍್ಯಾಕ್‌ಗಳು ಹಾಗೂ 11 ಸ್ವಯಂಚಾಲಿತ ಟೆಸ್ಟಿಂಗ್ ಕೇಂದ್ರಗಳನ್ನು ಈ ವರ್ಷಾಂತ್ಯದೊಳಗೆ ಸ್ಥಾಪನೆ ಮಾಡಲು ತೀರ್ಮಾಣಿಸಲಾಗಿದೆ. ಸ್ವಯಂಚಾಲಿತ ಡ್ರೈವಿಂಗ್ ಟೆಸ್ಟ್ ಟ್ರ‍್ಯಾಕ್‌ಗಳನ್ನು ಇಷ್ಟು ದೊಡ್ಡ ಸಂಖ್ಯೆಯಲ್ಲಿ ಆರಂಭಿಸುತ್ತಿರುವುದು ದೇಶದಲ್ಲಿ ಇದೇ ಮೊದಲು. ಈಗಾಗಲೇ ಏಳೆಂಟು ಜಿಲ್ಲೆಗಳಲ್ಲಿ ಕಾಮಗಾರಿ ಮುಕ್ತಾಯ ಹಂತದಲ್ಲಿದ್ದು, ಉಳಿದೆಡೆ ಕೆಲಸ ಪ್ರಗತಿಯಲ್ಲಿದೆ.
ಇದು ಕಾರ್ಯಾರಂಭವಾದರೆ ಡ್ರೈವಿಂಗ್ ಲೈಸೆನ್ಸ್ ಪರೀಕ್ಷಾ ಪ್ರಕ್ರಿಯೆ ಸೆನ್ಸಾರ್ ಮೂಲಕ ಸ್ವಯಂಚಾಲಿತ ನಿರ್ವಹಣೆಯಾಗಲಿದೆ. ಅದೇ ರೀತಿ ಸ್ವಯಂಚಾಲಿತ ಟೆಸ್ಟಿಂಗ್ ಸೆಂಟರ್‌ಗಳ ಮೂಲಕ ವಾಹನಗಳ ಫಿಟ್ನೆಸ್ ಸರ್ಟಿಫಿಕೆಟ್, ಆರ್‌ಆರ್ ನವೀಕರಣ ಇತ್ಯಾದಿ ಕೆಲಸಗಳನ್ನು ನಿರ್ವಹಿಸಲಾಗುತ್ತದೆ. ”ಸ್ಮಾರ್ಟ್ ಕಾರ್ಡ್ ವಿಚಾರಕ್ಕೆ ಸಂಬಂಧಿಸಿ ಟೆಂಡರ್ ಹಾಕಲು ಸಾಧ್ಯವಾಗದೆ ಇದ್ದವರೊಬ್ಬರು ನ್ಯಾಯಾಲಯಕ್ಕೆ ಹೋಗಿದ್ದರಿಂದ 1 ತಿಂಗಳು ಸಮಸ್ಯೆಯಾಗಿತ್ತು. ನ್ಯಾಯಾಲಯ ಅರ್ಜಿ ತಿರಸ್ಕಾರ ಮಾಡಿದ ಬಳಿಕ ಸ್ಮಾರ್ಟ್ ಕಾರ್ಡ್ ಸಮಸ್ಯೆ ಬಗೆಹರಿದಿದೆ.
ರಾಜ್ಯದಲ್ಲಿ ಮತ್ತಷ್ಟು ಆರ್‌ಟಿಒ ಕಚೇರಿ ಆರಂಭಿಸಲು ಸರಕಾರ ತೀರ್ಮಾನಿಸಿದ್ದು, ಕಾರ್ಯಾರಂಭ ಮಾಡಲು ಇನ್ಸ್ಪೆಕ್ಟರ್‌ಗಳ ಕೊರತೆ ಇತ್ತು. ಈಗಾಗಲೇ 80 ಕ್ಕೂ ಅಧಿಕ ಇನ್ಸ್ಪೆಕ್ಟರ್‌ಗಳನ್ನು ನೇಮಕ ಮಾಡಲಾಗಿದ್ದು, ಹೊಸದಾಗಿ 75 ಮಂದಿಯ ನೇಮಕ ಪ್ರಕ್ರಿಯೆ ಆರಂಭಗೊAಡಿದೆ.
- ಹೊಸ ಆರ್‌ಟಿಒ ಕಚೇರಿಗಳನ್ನು ಆರಂಭಿಸಲು ಇನ್ಸ್ಪೆಕ್ಟರ್‌ಗಳ ನೇಮಕ ಮಾಡಿಕೊಳ್ಳಲಾಗಿದ್ದು, 75 ಇನ್ಸ್ಪೆಕ್ಟರ್‌ಗಳ ನೇಮಕ ಪ್ರಕ್ರಿಯೆ ಪ್ರಗತಿಯಲ್ಲಿದೆ. ಸ್ವಯಂಚಾಲಿತ ಟೆಸ್ಟಿಂಗ್ ಕೇಂದ್ರ ಹಾಗೂ ಡೈವಿಂಗ್ ಟೆಸ್ಟ್ ಟ್ರ್ಯಾಕ್ ಗಳನ್ನು ಆರಂಭಿಸಲಾಗುತ್ತಿದೆ.

- ರಾಮಲಿಂಗಾ ರೆಡ್ಡಿ, ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವರು