ವಾಟೆಹೊಳೆ ಜಲಪಾತಕ್ಕೆ ಬಿದ್ದು ಇಬ್ಬರು ಯುವಕರು ನೀರುಪಾಲು
ಶಿರಸಿ: ಪ್ರವಾಸಕ್ಕೆ ಬಂದಿದ್ದ ಯುವಕರು ಕಾಲುಜಾರಿ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ವಾಟೆಹೊಳೆ ಜಲಾಶಯದಲ್ಲಿ ನಡೆದಿದೆ.
ಸಿದ್ದಾಪುರ ಸಮೀಪದ ವಾಟೆಹೊಳೆ ಜಲಾಶಯದಲ್ಲಿ ಪ್ರವಾಸಕ್ಕೆ ಬಂದಿದ್ದ ಆರು ಯುವಕರು ಈಜಲು ಹೋಗಿದ್ದರು. ಈ ವೇಳೆ ಜಾರಿಬಿದ್ದು, ಸುಹಾಸ್ ಶೆಟ್ಟಿ ಹಾಗೂ ಅಕ್ಷಯ್ ಭಟ್ ಎಂಬ ಯುವಕರು ಪ್ರಾಣ ಕಳೆದುಕೊಂಡಿದ್ದಾರೆ.
ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಯುವಕರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಶಿರಸಿಯ ಆಸ್ಪತ್ರೆಗೆ ಕಳುಹಿಸಲಾಗಿದೆ.


