ನಾಸಿಕ್: ಮಹಾರಾಷ್ಟ್ರದ ನಾಸಿಕ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐವರು ಪ್ರಯಾಣಿಕರು ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ.
ನಾಸಿಕ್‌ನ ದ್ವಾರಕಾ ಸೇತುವೆ ಬಳಿ ಟ್ರಕ್ ಮತ್ತು ಟೆಂಪೋ ನಡುವೆ ಅಪಘಾತ ಸಂಭವಿಸಿದೆ. ಕಬ್ಬಿಣದ ರಾಡ್ ಸಾಗಿಸುತ್ತಿದ್ದ ಟ್ರಕ್, ಟೆಂಪೋಗೆ ಡಿಕ್ಕಿ ಹೊಡೆದಿದ್ದು, ಟೆಂಪೋದಲ್ಲಿದ್ದ ಐವರು ದುರ್ಮರಣ ಹೊಂದಿದ್ದಾರೆ.
ಉಳಿದ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಟ್ರಕ್ ಚಾಲಕನನ್ನು ವಶಕ್ಕೆ ಪಡೆದಿರುವ ಪೊಲೀಸರು ಪ್ರಕರಣ ದಾಖಳಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.