ಬೆಳಗಾವಿ: ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ಸೇರಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೇಗ ಗುಣಮುಖರಾಗಲಿ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಾರೈಸಿದ್ದಾರೆ.
ಸಿ.ಟಿ ರವಿ ಅವರು, ಕಿತ್ತೂರಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಅವರ ಸಹೋದರ ಬೇಗ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥಿಸುವೆ ಎಂದು ಬರೆದುಕೊಂಡಿದ್ದಾರೆ. ಬೆಳಗಾವಿ ಅಧಿವೇಶನದ ವೇಳೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಸಿ.ಟಿ ರವಿ ನಡುವಿನ ಜಟಾಪಟಿ ರಾಜ್ಯಾದ್ಯಂತ ಸದ್ದು ಮಾಡಿತ್ತು.
ಸಿ.ಟಿ.ರವಿ ವಿರುದ್ಧ ಸಿಐಡಿ ತನಿಖೆ ನಡೆಯುತ್ತಿರುವುದು ಪ್ರತಿದಿನ ವಿವಾದಕ್ಕೆ ಕಾರಣವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರವಿ ಅವರ ಹಾರೈಕೆ ಮಹತ್ವ ಪಡೆದುಕೊಂಡಿದೆ. ಲಕ್ಷ್ಮಿ ಹೆಬ್ಬಾಳ್ಕರ್ ಬೆಂಗಳೂರಿನಿAದ ಬೆಳಗಾವಿಗೆ ತೆರಳುವ ವೇಳೆ ಕಿತ್ತೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ.
https://twitter.com/CTRavi_BJP/status/1879057192948809749