ಬೆಂಗಳೂರು: ಹಸುವಿನ ಕೆಚ್ಚಲುಗಳನ್ನು ಕೊಯ್ದು ಕಿಡಿಗೇಡಿಗಳು ಪರಾರಿಯಾಗಿರುವ ಘಟನೆ ರಾಜಧಾನಿ ಬೆಂಗಳೂರಿನ ಹೃದಯಭಾಗದಲ್ಲಿ ನಡೆದಿದೆ.
ನಗರದ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಇಂತಹ ಹೇಯಕೃತ್ಯ ನಡೆದಿದ್ದು, ಮರ‍್ನಾಲ್ಕು ಹಸುಗಳ ಕೆಚ್ಚಲುಗಳನ್ನು ಕೊಯ್ದು ಹಾಕಲಾಗಿದೆ. ಹಸುಗಳ ಕೆಚ್ಚಲಿನಲ್ಲಿ ರಕ್ತಸ್ರಾವವಾಗುತ್ತಿದ್ದು, ಸ್ಥಳೀಯರು ರಕ್ಷಣೆಗೆ ಧಾವಿಸಿದ್ದಾರೆ.
ಕಿಡಿಗೇಡಿಗಳ ಕೃತ್ಯದ ವಿರುದ್ಧ ಕ್ರಮಕ್ಕೆ ಸ್ಥಳೀಯರು ಆಗ್ರಹ ವ್ಯಕ್ತಪಡಿಸಿದ್ದು, ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಿಡಿಗೇಡಿಗಳ ವಿರುದ್ಧ ದೂರು ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.