ಆನೇಕಲ್: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಓರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ನೆರಳೂರು ಗ್ರಾಮದಲ್ಲಿ ನಡೆದಿದೆ.
ಘಟನೆಯಲ್ಲಿ ಬಿಹಾರ ಮೂಲದ ದಿನೇಶ್ ದಾಸ್ ಎಂಬ 38 ವರ್ಷದ ಕಾರ್ಮಿಕನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಲೈಟ್ ಸ್ವಿಚ್ ಆನ್ ಮಾಡುವಾಗ ಘಟನೆ ನಡೆದಿದೆ ಎನ್ನಲಾಗಿದೆ.
ಸಿಲೀಂಡರ್ ಗ್ಯಾಸ್ ಸೋರಿಕೆಯಾಗಿ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗಿದೆ. ಸ್ಫೋಟದ ತೀವ್ರತೆಗೆ ಮನೆಯ ತಗಡಿನ ಮೇಲ್ಚಾವಣಿ ಹಾರಿಹೋಗಿದ್ದು, ಗಾಯಾಳುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.