ರಾಜಕೀಯ ಸುದ್ದಿ

ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಆರ್​ಟಿಐ ಕಾರ್ಯಕರ್ತ ಗಂಗರಾಜು

Share It

ಮೈಸೂರು: ಮುಡಾ ಅಕ್ರಮ ಆರೋಪ ಕೇಸ್​ ಸಂಬಂಧ ಲೋಕಾಯುಕ್ತ ಅಧಿಕಾರಿಗಳ ವಿರುದ್ಧ ಆರ್​ಟಿಐ ಕಾರ್ಯಕರ್ತ ಗಂಗರಾಜು ಇ-ಮೇಲ್ ಮೂಲಕ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.

ಲೋಕಾಯುಕ್ತ ಹಿರಿಯ ಅಧಿಕಾರಿಗಳು, ಸಚಿವ ಭೈರತಿ ಸುರೇಶ್, ವಿಶೇಷ ಕರ್ತವ್ಯಧಿಕಾರಿ ಮಾರುತಿ ಬಗಲಿ, ಹಿಂದಿನ ಮುಡಾ ಆಯುಕ್ತರಾದ ನಟೇಶ್, ದಿನೇಶ್ ಇ-ಮೇಲ್ ಹಾಗೂ ಅಂಚೆ ಪತ್ರದ ಮೂಲಕ ದೂರು ಸಲ್ಲಿಕೆ ಮಾಡಲಾಗಿದೆ.

ದೂರಿನಲ್ಲಿ ಮುಡಾ ಕೇಸ್​ನಲ್ಲಿ ಸರ್ಚ್ ವಾರಂಟ್ ನೀಡಲು ವಿಳಂಬ ಮಾಡಲಾಗುತ್ತಿದೆ. ಜೊತೆಗೆ ಸರ್ಚ್ ವಾರಂಟ್ ನೀಡಿ ವಾಪಸ್​ ಪಡೆಯಲಾಗಿದೆ ಎಂದು ಆರೋಪಿಸಿದ್ದಾರೆ. ಹಗರಣ ಕುರಿತು ಲೋಕಾಯುಕ್ತ ದಾಖಲೆ ಸಂಗ್ರಹ ಮಾಡಿತ್ತು. ತನಿಖಾಧಿಕಾರಿಗಳು ಒಂದು ಸಾವಿರ ಪುಟಗಳ ದಾಖಲೆ ಸಂಗ್ರಹ ಮಾಡಿದ್ದರು.

ಲೋಕಾಯುಕ್ತ ಇನ್ಸ್​ಪೆಕ್ಟರ್ ರವಿಕುಮಾರ್ ತಂಡ ಸಾಕ್ಷಿ ಸಂಗ್ರಹಿಸಿತ್ತು. ಬಳಿಕ ಸರ್ಚ್ ವಾರಂಟ್ ನೀಡಲು ಅಂದಿನ ಎಸ್​ಪಿಗೆ ಮನವಿ ಸಲ್ಲಿಸಲಾಗಿತ್ತು. ಅವರು ಉದ್ದೇಶ ಪೂರ್ವಕವಾಗಿ ವಿಳಂಬ ಮಾಡಿ ಸರ್ಚ್ ವಾರಂಟ್ ನೀಡಿದ್ದರು. ಕೆಲವು ಅಧಿಕಾರಿಗಳಿಂದ ಸರ್ಕಾರಕ್ಕೆ ಈ ಮಾಹಿತಿ ಸೋರಿಕೆಯಾಗಿತ್ತು.

ಈ ಮೂಲಕ ಭೈರತಿ ಕಡತಗಳನ್ನು ಬೆಂಗಳೂರಿಗೆ ತರಿಸಿಕೊಂಡಿದ್ದಾರೆ. ಅಧಿಕಾರಿಗಳೂ ಶಾಮೀಲಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.


Share It

You cannot copy content of this page