ನವದೆಹಲಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಕೊನೆಗೂ ಸಕ್ರಿಯ ಚುನಾವಣಾ ರಾಜಕಾರಕ್ಕೆ ಧುಮುಕಿದ್ದಾರೆ.
ಸಹೋದರ ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಇದೀಗ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧಿಸಲಿದ್ದಾರೆ. ಈ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.
ಏತನ್ಮಧ್ಯೆ ಕೇಂದ್ರ ಚುನಾವಣಾ ಆಯೋಗ ಇಂದು ಮಂಗಳವಾರ ವಯನಾಡು ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆ ಮಾಡಿತ್ತು.