ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಜೆಡಿಎಸ್ ನಿಯೋಗ ಸಿಎಸ್‌ಗೆ ದೂರು
ಬೆಂಗಳೂರು: ಕುಮಾರಸ್ವಾಮಿ ವಿರುದ್ಧ ಪತ್ರದ ಮೂಲಕ ಹಂದಿಗೆ ಹೋಲಿಸಿ, ಚಂದ್ರಶೇಖರ್ ಟೀಕಿಸಿದ್ದಾರೆ. ಇದರಿಂದ ಕೇಂದ್ರ ಸಚಿವರಿಗೆ ಅಪಮಾನ ಮಾಡಲಾಗಿದೆ ಎಂದು ಚಂದ್ರಶೇಖರ್ ವಿರುದ್ದ ಕ್ರಮಕ್ಕೆ ಜೆಡಿಎಸ್ ನಿಯೋಗ ಸಿಎಸ್‌ಗೆ ಸೋಮವಾರ ದೂರು ನೀಡಿದ್ದಾರೆ.
ಜೆಡಿಎಸ್ ಶಾಸಕರು ಹಾಗೂ ಪರಿಷತ್ ಸದಸ್ಯರು ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ನೇತೃತ್ವದಲ್ಲಿ ದೂರು ನೀಡಿ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಬಿಜೆಪಿ ಶಾಸಕರುವ ಕೂಡ ಕುಮಾರಸ್ವಾಮಿ ಬೆಂಬಲಕ್ಕೆ ನಿಂತಿದ್ದು, ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಕಳಂಕಿತ ಅಧಿಕಾರಿ ಎಂದು ಬಿಜೆಪಿ ಆರೋಪಿಸಿದೆ. ಲೋಕಾಯುಕ್ತ ತನಿಖೆ ಪಾರದರ್ಶಕವಾಗಿ ನಡೆಯುವ ನಂಬಿಕೆ ಇಲ್ಲ. ಸಿಬಿಐ ತನಿಖೆಯೇ ಆಗಬೇಕೆಂದು ಒತ್ತಾಯಿಸಲು ಬಿಜೆಪಿ ಮುಂದಾಗಿದೆ. ಕೇಂದ್ರ ಸಚಿವರ ವಿರುದ್ಧವೇ ಲೋಕಾಯುಕ್ತ ಎಡಿಜಿಪಿ ಮಾತನಾಡುತ್ತಾರೆ. ಮುಡಾ ಕೇಸ್ ತನಿಖೆಯಲ್ಲಿ ಪಾರದರ್ಶಕತೆ ನಿರೀಕ್ಷೆ ಇಲ್ಲ ಎಂದು ಸಿಬಿಐ ತನಿಖೆಗೆ ಆಗ್ರಹಿಸಲು ಬಿಜೆಪಿ ಮುಂದಾಗಿದೆ. ಈ ಬಗ್ಗೆ ಮಾಹಿತಿ ಸಂಗ್ರಹಿಸಿ ಹೋರಾಟಕ್ಕೆ ವೇದಿಕೆ ಸಿದ್ಧಗೊಳಿಸಲಾಗುತ್ತಿದೆ ಎಂದು ಬಿಜೆಪಿ ಮೂಲಗಳು ತಿಳಿಸಿದೆ.