ಬೆಂಗಳೂರು: ಒಂದು ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಕಾರಣಕ್ಕೆ ಶಾಸಕರನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಸೂಕ್ತ ತನಿಖೆ ನಡೆಸಿ, ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ತಿಳಿಸಿದ್ದಾರೆ.
ಬಂಧನದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಶಾಸಕರು ಒಬ್ಬ ವ್ಯಕ್ತಿಯ ಬಗ್ಗೆ ಮಾತನಾಡುವುದಲ್ಲದೆ, ಒಂದು ಸಮಾಜದ ಬಗ್ಗೆ ಮಾತನಾಡಿದ್ದಾರೆ. ಹೀಗಾಗಿ ಅವರ ಮೇಲೆ ದೂರು ದಾಖಲಾಗಿದೆ. ಈ ದೂರಿನ ಅನ್ವಯ ಪೊಲೀಸರು ತಮ್ಮ ಕೆಲಸ ಮಾಡುತ್ತಾರೆ ಎಂದರು.
ಶಾಸಕರು ಧ್ವನಿ ನನ್ನದಲ್ಲ ಎಂಬ ಮಾತನ್ನು ಹೇಳಿದ್ದಾರೆ. ಹೀಗಾಗಿ, ಎಫ್ಎಫ್ ಎಲ್ ಗೆ ಕಳುಹಿಸಲಾಗುತ್ತದೆ. ಅದರಲ್ಲಿ ತಪ್ಪಿತಸ್ಥರೆಂದು ತಿಳಿದುಬಂದರೆ ಕಾನೂನು ತನ್ನ ಕೆಲಸವನ್ನು ತಾನು ಮಾಡುತ್ತದೆ ಎಂದು ಡಾ. ಜಿ.ಪರಮೇಶ್ವರ ತಿಳಿಸಿದ್ದಾರೆ.

