ಮೈಸೂರು: ಸಾಲಿಗ್ರಾಮ ತಾಲೂಕಿನ ಬೆಟ್ಟಹಳ್ಳಿಯಲ್ಲಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ಓರ್ವ ಸಾವನ್ನಪ್ಪಿ, 12 ಜನ ವಾಂತಿಭೇದಿಯಿಂದ ಅಸ್ವಸ್ಥಗೊಂಡಿರುವ ನಡೆದಿದೆ.
ಗೋವಿಂದೇಗೌಡ (65) ಮೃತ ವ್ಯಕ್ತಿ. ಗ್ರಾಮದ ಟ್ಯಾಂಕ್‌ನಿಂದ ಸರಬರಾಜಾಗಿದ್ದ ನೀರನ್ನು ಸೇವಿಸಿ ಕೆಲವರಿಗೆ ವಾಂತಿ ಭೇದಿ ಆಗಿದೆ ಎಂದು ಶಂಕಿಸಲಾಗಿದೆ. ಅಸ್ವಸ್ಥರನ್ನು ಸಾಲಿಗ್ರಾಮ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.
ತೀವ್ರ ಅಸ್ವಸ್ಥಗೊಂಡ ಗೋವಿಂದೇಗೌಡ ಅವರನ್ನು ಹಾಸನ ಜಿಲ್ಲೆಯ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ತಾಲೂಕು ಆಸ್ಪತ್ರೆಯ ವೈದ್ಯರು ಬೆಟ್ಟಹಳ್ಳಿ ಗ್ರಾಮಕ್ಕೆ ಭೇಟಿ ಜನರ ಆರೋಗ್ಯ ಪರೀಕ್ಷೆ ನಡೆಸಿದ್ದಾರೆ.

