ಲೋಕಾಯುಕ್ತ ಬಲೆಗೆ ಬಿದ್ದ ಭಟ್ಕಳ ಪುರಸಭೆ ಮುಖ್ಯಾಧಿಕಾರಿ

Oplus_131072

Oplus_131072

Share It

ಭಟ್ಕಳ : ಉತ್ತರ ಕನ್ನಡದ ಪ್ರಮುಖ ತಾಲೂಕಿನಲ್ಲಿ ಒಂದಾಗಿರುವ ಭಟ್ಕಳದ ಪುರಸಭೆ ವ್ಯಾಪ್ತಿಯಲ್ಲಿ ವ್ಯವಸ್ಥೆಗಳ ಬಗ್ಗೆ ಸಾರ್ವಜನಿಕ ಆಕ್ರೋಶ ವ್ಯಕ್ತವಾಗಿರುವ ನಡುವೆ, ಪುರಸಭೆಯ ಮುಖ್ಯಾಧಿಕಾರಿ ಲಂಚ ಪಡೆಯುವಾಗ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ.

ಪುರಸಭೆ ವ್ಯಾಪ್ತಿಯಲ್ಲಿ ಬೀದಿದೀಪಗಳು, ರಸ್ತೆಗಳು ಹಾಗೂ ಒಳಚರಂಡಿ ವ್ಯವಸ್ಥೆಗಳು ದಿನದಿಂದ ದಿನಕ್ಕೆ ಅತ್ಯಂತ ಕೆಟ್ಟ ಪರಿಸ್ಥಿತಿಗೆ ಇಳಿಯುತ್ತಿದೆ. ಹೀಗಿರುವಾಗಲೇ ಪುರಸಭೆಯ ಮುಖ್ಯಾಧಿಕಾರಿಯ ಲಂಚಾವತಾರ ಬಯಲಾಗಿದೆ.

50 ಸಾವಿರ ಲಂಚ ಪಡೆಯುವಾಗಲೇ ಪುರಸಭೆಯ ಮುಖ್ಯಾಧಿಕಾರಿ ನೀಲಕಂಠ ಮೆಸ್ತಾ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 50 ಸಾವಿರ ಲಂಚ ಪಡೆಯುವಾಗಲೇ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪುರಸಭೆ ಮುಖ್ಯಾಧಿಕಾರಿಯಾಗಿ ಕೆಲವು ತಿಂಗಳುಗಳಿಂದ ನೀಲಕಂಠ ಮೆಸ್ತಾ ಕೆಲಸ ಮಾಡುತ್ತಿದ್ದರು. ಭಟ್ಕಳದ ಪುರಸಭೆ ವ್ಯಾಪ್ತಿಯಲ್ಲಿ ಒಳಚರಂಡಿ ಕಾಮಗಾರಿ ಬಿರುಸಾಗಿ ಸಾಗುತ್ತಿದೆ.

ಈ ಒಳಚರಂಡಿ ಕಾಮಗಾರಿಗೆ 50 ಸಾವಿರ ರೂ. ಲಂಚ ಪಡೆಯುವಾಗ ಪುರಸಭೆಯ ಅಧಿಕಾರಿ ಸಿಕ್ಕಿಬಿದ್ದಿದ್ದಾರೆ. ತಮ್ಮ ಕಚೇರಿಯಲ್ಲಿ ಲಂಚ ಪಡೆಯುವಾಗ ಅಧಿಕಾರಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಕಾರವಾರ ಲೋಕಾಯುಕ್ತ ಎಸ್ ಪಿ ಕುಮಾರ ಚಂದ್ರ ನೇತೃತ್ವದಲ್ಲಿ ನಡೆದ ದಾಳಿ ನಡೆದಿದೆ.


Share It

You cannot copy content of this page