ಅಪರಾಧ ಸುದ್ದಿ

ಮಾರ್ಕೋನಹಳ್ಳಿ ಜಲಾಶಯದಲ್ಲಿ ಕೊಚ್ಚಿ ಹೋದ 6 ಮಂದಿ

Share It

ತುಮಕೂರು: ಮಾರ್ಕೋನಹಳ್ಳಿ ಜಲಾಶಯದಲ್ಲಿ ಆರು ಮಂದಿ ಕೊಚ್ಚಿಹೋಗಿರುವ ಘಟನೆ ಮಂಗಳವಾರ ನಡೆದಿದ್ದು, ಈ ಪೈಕಿ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಇನ್ನುಳಿದವರ ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದೆ.
ಅಬಿನ್ ಮತ್ತು ಸಾಜಿಯಾ (೩೨) ಎಂಬುವರ ಶವಗಳು ಪತ್ತೆಯಾಗಿವೆ. ತಬಸುಮ್ (೪೫), ಮಿಫ್ರಾ, ಶಬಾನ (೪೪), ಮಹಿಮ್ (೧), ಮಿಫ್ರಾ (೪) ಇವರ ಪತ್ತೆಯಾಗಬೇಕಿದೆ. ಘಟನೆಯಲ್ಲಿ ಅದೃಷ್ಟವಶಾತ್​​ ನವಾಜ್ ಎಂಬಾತನು ಜಲಾಶಯದ ಸಮೀಪ ಇರುವ ಪೊದೆಯಲ್ಲಿ ಸಿಲುಕಿಕೊಂಡಿದ್ದನು. ಈತ ಸಣ್ಣ ಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದು, ಕುಣಿಗಲ್ ತಾಲೂಕು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ತುಮಕೂರು ನಗರದ ಬಿಜಿ ಪಾಳ್ಯ ನಿವಾಸಿಗಳಾದ ೭ ಮಂದಿ ಕುಣಿಗಲ್ ತಾಲೂಕಿನ ಮಾಗಡಿಪಾಳ್ಯದಲ್ಲಿರುವ ಸಂಬAಧಿಕರ ಮನೆಗೆ ಹೋಗಿದ್ದರು. ಸಂಬAಧಿಕರ ಮನೆಯಲ್ಲಿ ಊಟ ಮುಗಿಸಿ ಮಂಗಳವಾರ ಮಾರ್ಕೋನಹಳ್ಳಿ ಜಲಾಶಯ ನೋಡಲು ೭ ಜನರು ಹೋಗಿದ್ದರು. ವೇಳೆ ಆಟೋಮ್ಯಾಟಿಕ್ ಆಗಿ ಅಣೆಕಟ್ಟಿನಲ್ಲಿನ ಸೈಫನ್ ವ್ಯವಸ್ಥೆ ಓಪನ್ ಆಗಿದ್ದರಿಂದ ನೀರಿನ ಹರಿವು ಹೆಚ್ಚಾಗಿ, ರಭಸವಾಗಿ ಹರಿದ ಕಾರಣ ಇವರೆಲ್ಲ ಕೊಚ್ಚಿಕೊಂಡು ಹೋಗಿರಬಹುದೆಂದು ಶಂಕೆ ವ್ಯಕ್ತಪಡಿಸಲಾಗಿದೆ.
ನಾಪತ್ತೆಯಾಗಿರುವ ನಾಲ್ವರಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬAಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share It

You cannot copy content of this page