ಉಪಯುಕ್ತ ಸುದ್ದಿ

ಬೆಂಗಳೂರಿಗೆ ಸರಬರಾಜಾಗುತ್ತಿದ್ದ ತಿರುಪತಿ ಲಡ್ಡು ಸ್ಥಗಿತ!

Share It

ಬೆಂಗಳೂರು : ಬೆಂಗಳೂರಿನ ವೈಯಾಲಿಕಾವಲ್​​ನಲ್ಲಿರುವ ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ಲಡ್ಡು ಪ್ರಸಾದ ವಿತರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಏಕೆಂದರೆ, ಬೆಂಗಳೂರಿಗೆ ಬರುತ್ತಿದ್ದ ಲಡ್ಡು ಪ್ರಸಾದವನ್ನು ಟಿಟಿಡಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

ಹೌದು, ತಿರುಪತಿಯಲ್ಲಿ ಬ್ರಹ್ಮೋತ್ಸವ ಹಿನ್ನೆಲೆಯಲ್ಲಿ ತಿಮ್ಮಪ್ಪನ ಸನ್ನಿದಿಯಲ್ಲಿ ಭಕ್ತರ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದೆ. ಇದರಿಂದ, ಬೆಟ್ಟದಿಂದ ಲಡ್ಡು ಪೂರೈಸುವ ವಾಹನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಹೀಗಾಗಿ ಅಕ್ಟೋಬರ್​​​ 12ರವರೆಗೆ ಬೆಂಗಳೂರಿನ ತಿರುಪತಿ ದೇವಸ್ಥಾನಕ್ಕೆ ಟಿಟಿಡಿ ಆಡಳಿತ ಮಂಡಳಿ ಲಡ್ಡು ಸರಬರಾಜು ಮಾಡುವುದಿಲ್ಲ.

ತಿರುಪತಿ ಲಡ್ಡು ವಿವಾದ
ತಿರುಪತಿ ದೇವಸ್ಥಾನದಲ್ಲಿ ನೀಡಲಾಗುವ ಪ್ರಸಾದವಾದ ಲಡ್ಡು ತಯಾರಿಕೆಗೆ ಕಳಪೆ ಗುಣಮಟ್ಟದ ತುಪ್ಪ ಬಳಸಲಾಗಿದೆ. ಆ ತುಪ್ಪದಲ್ಲಿ ಪ್ರಾಣಿಯ ಕೊಬ್ಬು, ಮೀನಿನ ಎಣ್ಣೆ ಮತ್ತಿತರ ಎಣ್ಣೆಗಳ ಅಂಶ ಇದ್ದುದು ಲ್ಯಾಬ್ ವರದಿಯಲ್ಲಿ ಪತ್ತೆಯಾಗಿತ್ತು. ಈ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿದ್ದು, ಹಿಂದೂಗಳ ಭಾವನಗೆ ದಕ್ಕೆ ಉಂಟು ಮಾಡಿದೆ.


Share It

You cannot copy content of this page