ರಾಜಕೀಯ ಸುದ್ದಿ

ರೇರಾ ಅಧ್ಯಕ್ಷರಾಗಿ ನಿವೃತ್ತ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ನೇಮಕ

Share It

ಬೆಂಗಳೂರು: ರೇರಾ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಿವೃತ್ತ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.

ರಾಕೇಶ್ ಸಿಂಗ್ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಯಾಗಿ, ಬಿಬಿಎಂಪಿ ಆಡಳಿತಾಧಿಕಾರಿ ಹುದ್ದೆಯನ್ನು ನಿಭಾಯಿಸುತ್ತಿದ್ದು, ಇತ್ತೀಚೆಗಷ್ಟೇ ನಿವೃತ್ತರಾಗಿದ್ದರು. ಜತೆಗೆ ರಾಜ್ಯದ ಎಲ್ಲ ಡ್ಯಾಂಗಳ ಪರಿಶೀಲಿಸಲು ನೇಮಿಸಿರುವ ಸಮಿತಿಯ ಅಧ್ಯಕ್ಷರಾಗಿ ಕೂಡ ರಾಕೇಶ್ ಸಿಂಗ್ ಕಾರ್ಯನಿರ್ವಹಿಸುತ್ತಿದ್ದಾರೆ.

ಇಷ್ಟೆಲ್ಲ ಜವಾಬ್ದಾರಿಯ ಜತೆಗೆ ರೇರಾ ಅಧ್ಯಕ್ಷರಾಗಿ ಕೂಡ ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ರೇರಾ ಅಧ್ಯಕ್ಷರ ಅಧಿಕಾರಾವಧಿ ಐದು ವರ್ಷಗಳ ಕಾಲ ಇರಲಿದೆ.


Share It

You cannot copy content of this page