ಮೈಸೂರು; ಪ್ರಗತಿಪರ ಸಂಘಟನೆಗಳು ಚಾಮುಂಡಿ ಬೆಟ್ಟದಲ್ಲಿ ಮಹಿಷ ಮಂಡಲೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ.
ಕಾರ್ಯಕ್ರಮ ನಡೆಯುವ ದಿನವಾದ ಮಧ್ಯಾಹ್ನದವರೆಗೆ ಭಕ್ತರ ಪ್ರವೇಶಕ್ಕೆ ಅವಕಾಶವಿಲ್ಲ ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ. ಈ ಸಮಯದಲ್ಲಿ ಭಕ್ತರಿಗೆ ಯಾವುದೇ ಸೇವೆಗಳನ್ನು ಬುಕ್ ಮಾಡಿಕೊಳ್ಳದಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಈ ನಡುವೆ ಕಾರ್ಯಕ್ರಮಕ್ಕೆ ತಡೆಯೊಡ್ಡಲು ಬಿಜೆಪಿ ಮತ್ತು ಹಿಂದೂ ಸಂಘಟನೆಗಳು ಮುಂದಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಮಾಡಲು ಸಿದ್ಧತೆ ನಡೆಸುತ್ತಿದ್ದಾರೆ.
ಈ ನಡುವೆ ಬೆಟ್ಟದಲ್ಲಿರುವ ಮಹಿಷಾಸುರ ಮೂರ್ತಿಗೆ ಬಣ್ಣ ಬಳಿಯುವ ಕೆಲಸ ನಡೆದಿದ್ದು, ಬಣ್ಣ ಬಳಿದ ನಂತರ ಮೂರ್ತಿಯನ್ನು ಬಟ್ಟೆಯಿಂದ ಮುಚ್ಚಲಾಗಿದೆ. ಬಣ್ಣ ಒಣಗುವವರೆಗೆ ಮೂರ್ತಿ ಮೇಲಿನ ಬಟ್ಟೆ ತೆಗೆಯದಿರಲು ತೀರ್ಮಾನಿಸಲಾಗಿದೆ.