ಮುಡಾ ಸೈಟ್​ ವಾಪಸ್​ ಕೊಟ್ಟಿರುವುದು ರಾಜಕೀಯ ಡ್ರಾಮಾ: ಬಿ.ವೈ.ವಿಜಯೇಂದ್ರ

Share It

ಬೆಂಗಳೂರು: ಮುಡಾ ಸೈಟ್​ ವಾಪಸ್​ ಕೊಟ್ಟಿರುವುದು ರಾಜಕೀಯ ಡ್ರಾಮಾ. ಸಿದ್ದರಾಮಯ್ಯನವರು ಇನ್ನು ಭಂಡತನ ಬಿಟ್ಟು ರಾಜೀನಾಮೆ ಕೊಡಬೇಕು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.

ಅನುಕಂಪ ಪಡೆಯಲು ಸಿದ್ದರಾಮಯ್ಯ ಸೈಟ್ ವಾಪಸ್ ಕೊಡುವ ನಿರ್ಧಾರ ಕೈಗೊಂಡಿದ್ದಾರೆ. ಹಾಗೂ ಕಾನೂನಿನ ಕುಣಿಕೆಯಿಂದ ಪಾರಾಗಲು ಸಿದ್ದರಾಮಯ್ಯ ಅವರು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ದೂರಿದ್ದಾರೆ.

ಸಿದ್ದರಾಮಯ್ಯನವರು ಭಂಡತನ ಬಿಟ್ಟು ರಾಜೀನಾಮೆ ಕೊಡಬೇಕು. ರಾಜೀನಾಮೆ ನೀಡುವ ಮೊದಲು ಸಿಎಂ ರಾಜ್ಯಪಾಲರ ಕ್ಷಮೆ ಕೇಳಬೇಕು. ಡಿಜಿಪಿಯವರು ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಪಾರ್ವತಿ ಅವರು ಅವರಾಗಿಯೇ ಪತ್ರ ಬರೆದಿದ್ದಾರೋ ಅಥವಾ ಬಲವಂತವಾಗಿ ಬರೆದಿದ್ದಾರೋ ಗೊತ್ತಿಲ್ಲ. ನಾನು ಜಗ್ಗಲ್ಲ, ಬಗ್ಗಲ್ಲ ಅಂತಾ ಸಿದ್ದರಾಮಯ್ಯ ಆರ್ಭಟ ಮಾಡುತ್ತಿದ್ದರು. ನಾನ್ಯಾಕೆ ಸೈಟ್ ವಾಪಸ್ ಕೊಡಬೇಕು, ನನಗೆ 62 ಕೋಟಿ ಕೊಡುತ್ತಾರಾ ಅಂತಾ ಸಿದ್ದರಾಮಯ್ಯ ಹೇಳಿದ್ದರು.

ಸಾಮಾಜಿಕ ಕಾರ್ಯಕರ್ತರು ಕೊಟ್ಟ ದೂರು, ಅದರ ಆಧಾರದಲ್ಲಿ ರಾಜ್ಯಪಾಲರು ಕೊಟ್ಟ ಅನುಮತಿ, ಕೋರ್ಟ್ ಆದೇಶ ಎಲ್ಲವೂ ಆಗಿದೆ. ಸಿದ್ದರಾಮಯ್ಯ ಸೈಟ್ ವಾಪಸ್ ಕೊಡುವ ನಿರ್ಧಾರ ಕೈಗೊಂಡಿದ್ದಾರೆ ಎಂದರೆ ಕಾನೂನಿನ ಕುಣಿಕೆಯಿಂದ ಪಾರಾಗಬೇಕು, ರಾಜಕೀಯ ಅನುಕಂಪ ಪಡೆಯಬೇಕು, ಸ್ವಪಕ್ಷದಲ್ಲೇ ತಡೆ ತಟ್ಟುವವರನ್ನು ಎದುರಿಸಬೇಕು ಅಂತಾ ಅಷ್ಟೇ ಎಂದರು.

ನಿನ್ನೆ ರಾತ್ರಿ ಮಹತ್ತರ ಬೆಳವಣಿಗೆಯಲ್ಲಿ ಸಿಎಂ ಧರ್ಮಪತ್ನಿಯವರು ಸಿಎಂ ಗಮನಕ್ಕೆ ಬರದೇ, ಸಿಎಂ ಪುತ್ರ ಗಮನಕ್ಕೂ ಬರದೇ ಸಿಎಂ ಅಧಿಕೃತ ನಿವಾಸದಿಂದಲೇ ಪತ್ರ ಬರೆದಿದ್ದಾರೆ.

ಹಿಂದೆ ಭ್ರಷ್ಟಾಚಾರ ಆರೋಪ ಬಂದಾಗ ಎಸಿಬಿ ರಚನೆ ಮಾಡಿದ್ದರು. ಲೋಕಾಯುಕ್ತ ಸಂಸ್ಥೆ ಮುಚ್ಚಿ ಹಾಕಿ ಎಸಿಬಿ ರಚನೆ ಮಾಡಿದ್ದರು. ಎಸಿಬಿ ರಚಿಸಿ ತಮಗೆ ಬೇಕಾದ ಅಧಿಕಾರಿಗಳನ್ನು ನೇಮಕ ಮಾಡಿದ್ದರು.

ಮುಡಾ ಸೈಟ್​ ಹಂಚಿಕೆ ಕೇಸ್​ನಲ್ಲಿ ಎರಡು ವಿಚಾರ ಗಮನಿಸಬೇಕು. ಮುಡಾ ನಿವೇಶನ ಹಂಚಿಕೆ ಮಾಡಿದ್ದು ಒಂದು ಕಡೆಯಾದರೆ. ಸಿಎಂ ಹಿಂಬಾಲಕರು, ರಿಯಲ್ ಎಸ್ಟೇಟ್ ದಲ್ಲಾಳಿಗಳಿಗೂ ಸೈಟ್ ಹಂಚಿಕೆ ಮಾಡಲಾಗಿದೆ ಎಂದು ಆರೋಪಿಸಿದರು.


Share It

You May Have Missed

You cannot copy content of this page