ಸಿ.ಟಿ ರವಿ ವಿರುದ್ಧ ಮಹಿಳಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ
ಬೆಂಗಳೂರು: ಸೌಮ್ಯಾ ರೆಡ್ಡಿ ನೇತೃತ್ವದಲ್ಲಿ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಕಮಿಟಿ ವತಿಯಿಂದ ಬಿಜೆಪಿ ಮತ್ತು ಸಿ.ಟಿ.ರವಿ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಚಳಿಗಾಲದ ಅಧಿವೇಶನದಲ್ಲಿ ಬಿಜೆಪಿ ಮಾಜಿ ಸಚಿವ ಸಿ. ಟಿ. ರವಿ, ಕಾಂಗ್ರೆಸ್ ಸಚಿವೆಗೆ ಅಶ್ಲೀಲ ಪದ ಬಳಕೆ ಮಾಡಿರುವುದು
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಬೆಳಗ್ಗೆ 11 ಗಂಟೆಗೆ ಪ್ರತಿಭಟನೆ ಆರಂಭಗೊಳ್ಳಲಿದೆ. ಸಾವಿರಾರು ಮಹಿಳಾ ಕಾರ್ಯಕರ್ತೆಯರು, ಮಹಿಳಾ ಸಂಘಟನೆಯ ಮುಖಂಡರು ಭಾಗವಹಿಸಲಿದ್ದಾರೆ.