ಬೆಂಗಳೂರು: ದಲಿತ ಸಿಎಂ ಕೂಗು ಹೆಚ್ಚಾಗುತ್ತಿರುವ ಬೆನ್ನಲ್ಲೇ ಗೃಹಸಚಿವ ಡಾ. ಜಿ. ಪರಮೇಶ್ವರ್ ಮತ್ತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಮತ್ತೊಮ್ಮೆ ಭೇಟಿಯಾಗಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.
ಶನಿವಾರವಷ್ಟೇ ದೆಹಲಿಯಲ್ಲ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದ ಸತೀಶ್ ಜಾರಕಿಹೊಳಿ, ಭಾನುವಾರ ಇದ್ದಕ್ಕಿದ್ದಂತೆ ಪರಮೇಶ್ವರ್ ಭೇಟಿಯಾಗುವ ಮೂಲಕ ಕುತೂಹಲ ಮೂಡಿಸಿದ್ದಾರೆ.
ಸಿದ್ದರಾಮಯ್ಯ ನಂತರ ಯಾರು? ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ? ಎಂಬೆಲ್ಲ ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲೇ ದಲಿತ ಸಿಎಂ ಸ್ಥಾನದ ಚರ್ಚೆ ನಡೆಯುತ್ತಿದೆ. ರೇಸ್ ನಲ್ಲಿ ಸತೀಶ್ ಜಾರಕಿಹೊಳಿ ಹಾಗೂ ಡಾ. ಜಿ. ಪರಮೇಶ್ವರ್ ಇಬ್ಬರೂ ಇದ್ದಾರೆ.
ಈ ನಡುವೆ ಸತೀಶ್ ಜಾರಕಿಹೊಳಿ ದೆಹಲಿಗೆ ತೆರಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದರು. ಇದೀಗ ಮತ್ತೊಬ್ಬ ಆಕಾಂಕ್ಷಿ ಪರಮೇಶ್ವರ್ ಭೇಟಿಯಾಗಿದ್ದು, ಇದು ಕುತೂಹಲ ಮೂಡಿಸಿದೆ. ಇಬ್ಬರ ಭೇಟಿಯ ಕಾರಣ ಏನೆಂಬುದು ಮಾತ್ರ ಕುತೂಹಲ ಮೂಡಿಸಿದೆ.