ರಾಜಕೀಯ ಸುದ್ದಿ

ಚನ್ನಪಟ್ಟಣ ಟಿಕೆಟ್ ಗೊಂದಲ: ಮೈತ್ರಿ ಸಮನ್ವಯ ಸಮಿತಿ ಸಭೆ ಮುಂದೂಡಿಕೆ

Share It

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸಂಬಂಧ ಟಿಕೆಟ್ ಗೊಂದಲದ ಹಿನ್ನೆಲೆಯಲ್ಲಿ ಮೈತ್ರಿ ಪಕ್ಷದ ಸಮನ್ವಯ ಸಮಿತಿ ಸಭೆ ಮುಂದೂಡಲಾಗಿದೆ.

ಬುಧವಾರ ಸಂಜೆ ಮೈತ್ರಿ ಸಮನ್ವಯ ಸಭೆ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ಇಂದು ಸಿ.ಪಿ. ಯೋಗೇಶ್ವರ್ ದಿಢೀರನೆ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಜೆಡಿಎಸ್ ಅಭ್ಯರ್ಥಿ ಯಾರು ಎಂಬ ಕುರಿತು ಇದೀಗ ಚರ್ಚೆ ಆರಂಭವಾಗಿದೆ.

ಈ ಹಿನ್ನೆಲೆಯಲ್ಲಿ ಮೈತ್ರಿ ಸಭೆಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಗಮಿಸಲು ಹಿಂದೇಟು ಹಾಕಿದ್ದಾರೆ ಎನ್ನಲಾಗಿದೆ. ಹೀಗಾಗಿ ಬಿಜೆಪಿ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ನಡೆಯಬೇಕಿದ್ದ ಸಭೆಯನ್ನು ಮುಂದೂಡಲಾಗಿದೆ.


Share It

You cannot copy content of this page