ಅಪರಾಧ ರಾಜಕೀಯ ಸುದ್ದಿ

ಮೂಡ ಸೈಟ್ ವಾಪಸ್ ಮಾಡಿದ್ದಾಯ್ತು; ಈಗ ಖರ್ಗೆ ಕುಟುಂಬದ ಸಿದ್ದಾರ್ಥ್ ಟ್ರಸ್ಟ್ ಪಡೆದಿದ್ದ 5 ಎಕರೆ ಆಸ್ತಿ ವಾಪಸ್ ಗೆ ನಿರ್ಧಾರ

Share It

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ವಿವಾದ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಸಿದ್ದಾರ್ಥ ವಿಹಾರ್ ಟ್ರಸ್ಟ್ ಗೆ ನೀಡಿರುವ ಕೆಐಎಡಿಬಿ ಸಿಎ ಸೈಟ್ ವಾಪಸ್ ನೀಡಲು ತೀರ್ಮಾನಿಸಲಾಗಿದೆ.

ಈ ವಿವಾದ ರಾಜ್ಯಪಾಲರ ಅಂಗಳಕ್ಕೆ ತಲುಪುತ್ತಿದ್ದಂತೆಯೇ ಖರ್ಗೆ ಕುಟುಂಬ ಈ ಸೈಟ್​ಗಳನ್ನು ವಾಪಸ್ ನೀಡಲು ನಿರ್ಧರಿಸಿದೆ. ಈ ಬಗ್ಗೆ ಇಂದು (ಅಕ್ಟೋಬರ್ 13) ಬೆಂಗಳೂರಿನಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸುದ್ದಿಗೋಷ್ಠಿ ನಡೆಸಿ ತಮ್ಮ ಕುಟುಂಬದ ಟ್ರಸ್ಟ್​ಗೆ ನೀಡಲಾಗಿದ್ದ ಸೈಟ್​ ಹಿಂದಿರುಗಿಸುವ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಕೆಐಎಡಿಬಿ ಹಂಚಿಕೆ ಮಾಡಿದ್ದ ಭೂಮಿ ವಾಪಸ್​​ಗೆ ನಿರ್ಧರಿಸಲಾಗಿದೆ. ಕಾನೂನು ಬಾಹಿರವಾಗಿ ಸೈಟ್ ಹಂಚಿಕೆಯಾಗಿದೆ ಎಂಬ ಆರೋಪವಿತ್ತು. ಈ ವಿಚಾರದಲ್ಲಿ ಟ್ರಸ್ಟ್ ಅಧ್ಯಕ್ಷ ರಾಹುಲ್​ಗೆ ಮಾಹಿತಿ ಇರಲಿಲ್ಲ ಅನ್ಸುತ್ತೆ. ನಮ್ಮ ಕುಟುಂಬದಲ್ಲಿ ಮೂವರು ಅಷ್ಟೇ ರಾಜಕೀಯದಲ್ಲಿ ಇದ್ದೇವೆ. ನಮ್ಮ ಅಣ್ಣ ಅವರು ಮೃದು ಸ್ವಭಾವದವರು. ಅವರಿಂದ ಕುಟುಂಬದ ಸದಸ್ಯರರಿಗೆ ಹಿಂಸೆ ಆಗುತ್ತಿದೆ ಎಂದು ನೊಂದಿದ್ದಾರೆ . ಹೀಗಾಗಿ ಸೆಪ್ಟೆಂಬರ್ 29 ರಂದು ಅವರು ಕೆಐಎಡಿಬಿಗೆ ಪತ್ರ ಬರೆದಿದ್ದಾರೆ. ಸೈಟ್ ಕೊಟ್ಟಿರೋದನ್ನ ಕಾನೂನಾತ್ಮಕವಾಗಿ ಮರಳಿ‌ ನೀಡುತ್ತಿದ್ದೇವೆ ಎಂದು ಪತ್ರ ಬರೆದಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಟ್ರಸ್ಟ್ ಅಧ್ಯಕ್ಷ ರಾಹುಲ್‌ ಖರ್ಗೆ ಅವರಿಗೆ ಹೆಚ್ಚು ಅರಿವು ಇರಲಿಲ್ಲ ಅನ್ಸುತ್ತೆ. ಅವರಿಗೆ ಕೇಂದ್ರದಿಂದ ಸಾಕಷ್ಟು ಅವಾರ್ಡ್ ಸಿಕ್ಕಿದೆ. ಯುಪಿಎಸ್ಇ ನಲ್ಲೂ ರ್ಯಾಂಕ್ ಬಂದಿದ್ರು. ಯುರೋಸ್ಪೇಸ್ ನಲ್ಲಿ ಜಾಗ ಬೇಕು ಅಂತ ಅರ್ಜಿ ಹಾಕಿದ್ದರು. ಅದರ ಅನ್ವಯ ಅವರಿಗೆ ಸೈಟ್ ಅಲರ್ಟ್​​ ಆಗಿದೆ. ಸಂಪೂರ್ಣ ದಾಖಲೆ ಆಧಾರದ‌ ಮೇಲೆ ಸೈಟ್ ಸಿಕ್ಕಿದೆ. ಇಲ್ಲಿ ತರಾತುರಿಯಲ್ಲಿ ಏನು ಆಗಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸಮಜಾಯಿಷಿ ನೀಡಿದರು.

ಸಿಎ ಸೈಟ್ ತೆಗೆದುಕೊಳ್ಳುವ ಬಗ್ಗೆ ರಾಹುಲ್ ಖರ್ಗೆ ನಿರ್ಧಾರ ಮಾಡಿದ್ದರು. ಈಗ ಅವರೇ ಇಷ್ಟ ಇಲ್ಲ ಅಂತ ಮರಳಿ ನೀಡಿದ್ದಾರೆ. ರಾಹುಲ್ ಖರ್ಗೆ ಯಾರು ಅಂತ ಯಾರಿಗೂ ಗೊತ್ತಿಲ್ಲ. ಕಷ್ಟಪಟ್ಟು ರಾಹುಲ್‌ ಖರ್ಗೆ ಯುಪಿಎಸ್ಇ ಪಾಸ್ ಆಗಿದ್ದಾರೆ. ಕಷ್ಟಪಟ್ಟು ನಮ್ಮ ಕುಟುಂಬದಲ್ಲಿ ರಾಹುಲ್‌ ಖರ್ಗೆ ವಿದ್ಯಾಭ್ಯಾಸ ಮಾಡಿದ್ದಾರೆ. ಇದೊಂದು ರಾಜಕೀಯ ಆರೋಪ ಅಷ್ಟೇ. ಆದ್ರೆ ಇದರಲ್ಲಿ ಯಾವುದೇ ಅಕ್ರಮ ನಡೆದಿಲ್ಲ. ರಾಹುಲ್ ಖರ್ಗೆ ನಮ್ಮ ರೀತಿ ಅಲ್ಲ.. ಅವರು ಮೃದು ಸ್ವಭಾವದವರು. ಬಿಜೆಪಿಯವರು ಮನುಸ್ಕೃತಿ ಸ್ವಭಾವದವರು. ಬಿಜೆಪಿ ನಾಯಕರ ಮಕ್ಕಳನ್ನ ಆರೆಸ್ಸೆಸ್ ಗೆ ಕಳಿಸೋದಿಲ್ಲ. ನಮಗೆ ಸದಾ ಕಾಲ ವೈಯಕ್ತಿಕವಾಗಿ ದಾಳಿ‌ ಮಾಡುತ್ತಾರೆ. ಚುಚ್ಚು ಮಾತುಗಳನ್ನ ತೇಜೋವಧೆ ಮಾಡುತ್ತಾರೆ ಎಂದು ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.


Share It

You cannot copy content of this page