ಚಿಕ್ಕಮಗಳೂರು: ದೇವೀರಮ್ಮ ಬೆಟ್ಟದಲ್ಲಿ ನೂಕುನುಗ್ಗಲು, 10 ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ
ಚಿಕ್ಕಮಗಳೂರು: ಪುರಾಣ ಪ್ರಸಿದ್ಧ ದೇವೀರಮ್ಮ ದೇವಸ್ಥಾನದ ಬೆಟ್ಟಕ್ಕೆ ಹತ್ತು ನೂಕುನುಗ್ಗಲು ಉಂಟಾಗಿದ್ದು, ಹತ್ತಕ್ಕೂ ಹೆಚ್ಚು ಭಕ್ತರು ಈಗಾಗಲೇ ಅಸ್ವಸ್ಥಗೊಂಡಿದ್ದಾರೆ ಎಂದು ವರದಿಯಾಗಿದೆ.
ದೀಪಾವಳಿ ಹಬ್ಬದ ಪ್ರಯುಕ್ತ ದೇವೀರಮ್ಮ ಬೆಟ್ಟಕ್ಕೆ ಸಾವಿರಾರು ಮಂದಿ ಭಕ್ತರು ಕಾಲ್ನಡಿಗೆಯಲ್ಲಿ ತೆರಳುತ್ತಾರೆ. ಈ ವರ್ಷ ಆ ಸಂಖ್ಯೆ ಸುಮಾರು 50 ಸಾವಿರಕ್ಕೇರಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಬೆಟ್ಟದಲ್ಲಿ ನೂಕುನುಗ್ಗಲು ಉಂಟಾಗಿದೆ.
ಕಳೆದ ಒಂದು ವಾರದಿಂದ ಮಳೆಯೂ ಜೋರಾಗಿದ್ದು, ಬೆಟ್ಟ ಹತ್ತುವ ದಾರಿಯಲ್ಲಿ ಜಾರುತ್ತಿದ್ದಾರೆ. ಇದರಿಂದ ಕೆಲವರು ಗಾಯಗೊಂಡು, ಆಸ್ಪತ್ರೆಗೆ ಸೇರುತ್ತಿದ್ದಾರೆ ಎನ್ನಲಾಗಿದೆ. ಬೆಟ್ಟಕ್ಕೆ ಐದು ಮಾರ್ಗಗಳ ಮೂಲಕ ಹತ್ತಲು ವ್ಯವಸ್ಥೆ ಕಲ್ಪಿಸಿದ್ದರೂ, ಜನರನ್ನು ನಿಯಂತ್ರಣ ಮಾಡಲು ಸಾಧ್ಯವಾಗುತ್ತಿಲ ಎನ್ನಲಾಗಿದೆ.
ಜಿಲ್ಲಾಡಳಿತ ಅಸ್ವಸ್ಥ ಗೊಳ್ಳುವ ಭಕ್ತರ ಅನುಕೂಲಕ್ಕಾಗಿ ಸ್ಥಳದಲ್ಲಿಯೇ ಅಂಬ್ಯುಲೆನ್ಸ್ ನಿಲ್ಲಿಸಿದ್ದು, ಅಗತ್ಯವಿರುವವರನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ಕಳುಹಿಸಲಾಗುತ್ತಿದೆ. ಸುಮಾರು 800 ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಿದ್ದು, ಜನರನ್ನು ನಿಯಂತ್ರಣ ಮಾಡಲು ಪೊಲೀಸರು ಹರಸಾಹಸ ಮಾಡುತ್ತಿದ್ದಾರೆ.