ರಾಜಕೀಯ ಸುದ್ದಿ

ಮಕ್ಕಳ ಬಗ್ಗೆ ಶಿಕ್ಷಕರು ಹೆಚ್ಚಿನ ಕಾಳಜಿ ವಹಿಸಬೇಕು: ಶಾಸಕ ಕೆ ಗೋಪಾಲಯ್ಯ

Share It

ಬೆಂಗಳೂರು: ಪ್ರಸ್ತುತ ಕಾಲಘಟ್ಟದಲ್ಲಿ ಶಿಕ್ಷಣ ಬಹಳ ಮುಖ್ಯವಾಗಿದೆ. ಇಂದಿನ ಮಕ್ಕಳು ಉತ್ತಮ ಶಿಕ್ಷಣವನ್ನು ಪಡೆದರೆ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯ. ಶಿಕ್ಷಕರು ಬೋಧಿಸುವ ಪಾಠವನ್ನು ಮಕ್ಕಳು ಸರಿಯಾದ ರೀತಿಯಲ್ಲಿ ಆಲಿಸಿಕೊಂಡು ಕಲಿತು ಉತ್ತಮ ಅಂಕಗಳೊಂದಿಗೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು ಎಂದು ಹೇಳಿದರು.

ಪೋಷಕರು ಬಹಳ ಬಡತನದಿಂದ ಕಷ್ಟದಿಂದ ತಮ್ಮ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸುತ್ತಾರೆ ಅದಕ್ಕೆ ಅನುಗುಣವಾಗಿ ಮಕ್ಕಳು ಶ್ರದ್ಧೆಯಿಂದ ಕಲಿತು ಭವಿಷ್ಯವನ್ನು ಉಜ್ವಲ ಗೊಳಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳ ಬ್ಯಾಗ್ ನಲ್ಲಿ ಮಾದಕ ವಸ್ತುಗಳು ಪತ್ತೆಯಾಗಿರುವುದು ಕಂಡು ಬಂದಿದೆ. ಈ ಸಂಬಂಧ ಶಾಲೆಯ ಶಿಕ್ಷಕರು ಬಹಳ ಜಾಗ್ರತೆಯಿಂದಮಕ್ಕಳ ಬ್ಯಾಗ್ ಅನ್ನು ಪರಿಶೀಲನೆ ಮಾಡಬೇಕು. ಪೋಷಕರು ಕೆಲಸದ ಒತ್ತಡದಿಂದ ಮಕ್ಕಳನ್ನು ಶಾಲೆಗೆ ಬಿಟ್ಟು ಹೋಗುತ್ತಾರೆ. ವಿದ್ಯಾರ್ಥಿಗಳು ಹೆಚ್ಚು ಕಾಲ ಶಿಕ್ಷಕರ ಒಡನಾಟದಲ್ಲಿ ಪಾಠ ಕಲಿಯುತ್ತಾರೆ ಈ ಸಮಯದಲ್ಲಿ ವಿದ್ಯಾರ್ಥಿಗಳ ಹಾವಭಾವ ಗಮನಿಸಿ ಅವರು ತಪ್ಪು ದಾರಿ ಹಿಡಿಯದಂತೆ ಬುದ್ಧಿ ಹೇಳಬೇಕು ಎಂದು ಹೇಳಿದರು.


Share It

You cannot copy content of this page