ಬೆಂಗಳೂರು: ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ವಿರುದ್ಧ ನಡೆಯುತ್ತಿರುವ ಕಾನೂನು ಮತ್ತು ರಾಜಕೀಯ ಹೋರಾಟದ ನಡುವೆ ಸಿಎಂ ಸಿದ್ದರಾಮಯ್ಯ ದೆಹಲಿ ಕಡೆಗೆ ಪ್ರಯಾಣ ಬೆಳೆಸಲಿದ್ದಾರೆ.
ಸಿಎಂ ಸಿದ್ದರಾಮಯ್ಯ ಪರ ಕಾನೂನು ಹೋರಾಟಕ್ಕೆ ಕಾಂಗ್ರೆಸ್ ನ ಘಟಾನುಘಟಿ ನಾಯಕರು, ಸುಪ್ರೀಂ ಕೋರ್ಟ್ ನ ಬಹುದೊಡ್ಡ ವಕೀಲರು ಆದ ಕಪಿಲ್ ಸಿಬಲ್ ಮತ್ತು ಅಭಿಷೇಕ್ ಮನು ಸಿಂಘ್ವಿ ಬೆಂಗಳೂರಿಗೆ ಆಗಮಿಸಿದ್ದರು. ಸಧ್ಯಕ್ಕೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.
ಈ ನಡುವೆ ಗುರುವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದು, ಶಾಸಕರ ಅಭಿಪ್ರಾಯ ಪಡೆದು ನಂತರ ಶುಕ್ರವಾರ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದಾರೆ. ದೆಹಲಿಯಲ್ಲಿ ಹಿರಿಯ ನಾಯಕರ ಜತೆಗೆ ಚರ್ಚೆ ನಡೆಸಲಿದ್ದಾರೆ.
ಪ್ರಕರಣದ ಕುರಿತು ಚರ್ಚೆ ನಡೆಸುವ ಜತೆಗೆ ಮುಂದಿನ ಕಾನೂನು ಹೋರಾಟ, ರಾಜಕೀಯವಾಗಿ ರಾಜ್ಯಾದ್ಯಂತ ನಡೆಯುವ ಹೋರಾಟಗಳು ಸೇರಿ ಇನ್ನಿತರ ವಿಚಾರಗಳ ಕುರಿತು ಹೈಕಮಾಂಡ್ ಜತೆಗೆ ಚರ್ಚೆ ನಡೆಸಲಿದ್ದಾರೆ. ಮುಂದಿನ ಬೆಳವಣಿಗೆಯ ಬಗ್ಗೆ ಹೈಕಮಾಂಡ್ ನಾಯಕರಿಗೆ ಮನವರಿಕೆ ಮಾಡಿಕೊಡಲಿದ್ದಾರೆ ಎನ್ನಲಾಗುತ್ತಿದೆ.