ಕಲಬುರಗಿ: ಇತ್ತೀಚಿಗೆ ಲಿಂಗೈಕ್ಯರಾದ ಶರಣಬಸವೇಶ್ವರ ಸಂಸ್ಥಾನ ಪೀಠಾಧಿಪತಿಗಳಾಗಿದ್ದ ಪೂಜ್ಯ ಶ್ರೀ ಡಾ. ಶರಣಬಸವಪ್ಪ ಅಪ್ಪಾಜೀ ಅವರ ಕುಟುಂಬ ವರ್ಗದವನ್ನು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿ ಸಾಂತ್ವನ ಹೇಳಿದರು.
ಡಾ ಅಪ್ಪಾಜೀ ಅವರ ಶೈಕ್ಷಣಿಕ ಕ್ಷೇತ್ರದ ಕೊಡುಗೆ ಸ್ಮರಿಸಿದ ಖರ್ಗೆ ಅವರು ಹೈದರಾಬಾದ್ ಕರ್ನಾಟಕದದಂತ ಹಿಂದುಳಿದ ಪ್ರದೇಶದಲ್ಲಿ ಅಕ್ಷರ ಕ್ರಾಂತಿ ಜತೆಗೆ ಸಂಸ್ಥಾನದ ಮಹತ್ತರ ಕೊಡುಗೆಯಾದ ದಾಸೋಹವನ್ನು ದಶಕಗಳ ಕಾಲ ಮುಂದುವರೆಸಿಕೊಂಡು ಬಂದಿದ್ದರು ಎಂದು ಸ್ಮರಿಸಿದರು.
ಡಾ ಅಪ್ಪಾಜೀ ಅವರ ಪುತ್ರ ಚಿರಂಜೀವಿ ದೊಡ್ಡಪ್ಪ ಅಪ್ಪ ಅವರನ್ನು ತಮ್ಮ ಪಕ್ಕದಲ್ಲಿ ಕುಳ್ಳಿರಿಸಿಕೊಂಡು ಆತ್ಮೀಯವಾಗಿ ಮಾತನಾಡಿಸಿದರು.
ಈ ಸಂದರ್ಭದಲ್ಲಿ ದಾಕ್ಷಾಯಿಣಿ ಅವ್ವಾಜೀ, ರಾಧಾಬಾಯಿ ಖರ್ಗೆ, ಸಚಿವ ಶರಣಬಸಪ್ಪ ದರ್ಶನಾಪುರ ಸೇರಿ ಹಲವರಿದ್ದರು.