ಸುದ್ದಿ

ವಾಣಿ ವಿಲಾಸ ಸಾಗರ ಡ್ಯಾಂನಿಂದ ಹೊಳಲ್ಕೆರೆ ತಾಲ್ಲೂಕಿನ ಪ್ರತಿ ಗ್ರಾಮಕ್ಕೂ ಕುಡಿಯುವ ನೀರು!

Share It

ಹಿರಿಯೂರು: ಹಿರಿಯೂರಿನ ವಾಣಿವಿಲಾಸ ಸಾಗರ ಜಲಾಶಯದಿಂದ ಹೊಳಲ್ಕೆರೆ ತಾಲ್ಲೂಕಿನ ಪ್ರತಿ ಮನೆಗೆ ಶುದ್ಧ ಕುಡಿಯುವ ನೀರು ಪೂರೈಸಲು 367 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎಂದು ಹೊಳಲ್ಕೆರೆ ಶಾಸಕ ಎಂ‌.ಚಂದ್ರಪ್ಪ ತಿಳಿಸಿದ್ದಾರೆ.

ಹೊಳಲ್ಕೆರೆಯಲ್ಲಿ ಕೆರೆ ಅಭಿವೃದ್ಧಿ ಯೋಜನೆಗೆ ಪೂಜೆ ನೆರವೇರಿಸಿದ ಶಾಸಕ ಎಂ.ಚಂದ್ರಪ್ಪ ಮಾತನಾಡಿ, ವಾಣಿವಿಲಾಸ ಸಾಗರದ ಮಧ್ಯೆ 40 ಅಡಿ ಆಳದಲ್ಲಿ ಪಿಲ್ಲರ್ ಹಾಕಿ ಮೋಟಾರ್ ಕೂರಿಸಿ 60 ಕೋಟಿ ರೂಪಾಯಿ ವೆಚ್ಚದಲ್ಲಿ ಪಿಲ್ಲರ್ ಅಳವಡಿಸಲಾಗಿದೆ ಎಂದರು.


Share It

You cannot copy content of this page