ಅಪರಾಧ ಸುದ್ದಿ

ಅತಿದೊಡ್ಡ ಡ್ರಗ್ ಜಾಲವನ್ನು ಪತ್ತೆ ಮಾಡಿದ ಮಂಗಳೂರು ಸಿಸಿಬಿ ಪೊಲೀಸರು: ನೈಜೀರಿಯಾ ಪ್ರಜೆಯ ಬಂಧನ

Share It

ಮಂಗಳೂರು: ಮಂಗಳೂರು ಕೇಂದ್ರ ಅಪರಾಧ ವಿಭಾಗ (ಸಿಸಿಬಿ)ದ ಪೊಲೀಸರು ಅತಿದೊಡ್ಡ ಡ್ರಗ್ ಜಾಲವನ್ನು ಪತ್ತೆ ಮಾಡಿದ್ದಾರೆ.
ರಾಜ್ಯದ ವಿವಿಧಡೆಗೆ ಡ್ರಗ್​​ ಪೂರೈಕೆ ಮಾಡುತ್ತಿದ್ದ ನೈಜೀರಿಯಾ ಪ್ರಜೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆತನಿಂದ 6 ಕೆ.ಜಿಯ ಆರು ಕೋಟಿ ರೂ. ಮೌಲ್ಯದ ಎಂಡಿಎಂ ಡ್ರಗ್ ವಶಪಡಿಸಿಕೊಂಡಿದ್ದಾರೆ.

ಸಿಸಿಬಿ ಪೊಲೀಸರು ವಾರದ ಹಿಂದೆ ಹೈದರ್ ಅಲಿ ಎಂಬಾತನನ್ನು ವಶಕ್ಕೆ ಪಡೆದಿದ್ದರು. ಆತನನ್ನು ವಿಚಾರಣೆಗೆ ಒಳಪಡಿಸಿದಾಗ ನೈಜೀರಿಯಾ ಪ್ರಜೆಯ ಕೈವಾಡ ಇರುವುದು ತಿಳಿದುಬಂದಿದೆ. ನೈಜೀರಿಯಾ ಪ್ರಜೆಯ ಮಾಹಿತಿ ಕಲೆ ಹಾಕಿದ ಸಿಸಿಬಿ ಪೊಲೀಸರು ಆತ ಬೆಂಗಳೂರಿನಲ್ಲಿ ವಾಸವಿರುವುದು ತಿಳಿದಿದೆ. ಕೂಡಲೆ ಕಾರ್ಯಪ್ರವೃತರಾದ ಸಿಸಿಬಿ ಪೊಲೀಸರು ಬೆಂಗಳೂರಿಗೆ ತೆರಳಿ ನೈಜೀರಿಯಾ ಪ್ರಜೆಯನ್ನು ಬಂಧಿಸಿದ್ದಾರೆ.

ನೈಜೀರಿಯಾ ಪ್ರಜೆ ಬಳಿ ಇದ್ದ 17 ಸಿಮ್ ಕಾರ್ಡ್​, ​ ಪಾಸ್‌ಪೋರ್ಟ್ ಸಹಿತ ಎಲ್ಲ ದಾಖಲೆಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿ ಸಣ್ಣ ಸಣ್ಣ ಪ್ಯಾಕೆಟ್​ಗಳ ಮೂಲಕ ರಾಜ್ಯದ ಹಲವಡೆ ಡ್ರಗ್ಸ್​ ಪೂರೈಕೆ ಮಾಡುತ್ತಿದ್ದ. ಚಿಪ್ಸ್, ಬಿಸ್ಕೆಟ್ ಮತ್ತು ಗುಟ್ಕಾ ಪ್ಯಾಕೆಟ್​ಗಳಲ್ಲಿ ಡ್ರಗ್ಸ್​ ಹಾಕುತ್ತಿದ್ದ.

ಬಳಿಕ ಈ ಪ್ಯಾಕೆಟ್​​ಗಳನ್ನು ಕಸ ಎಸೆಯುವ ಜಾಗದಲ್ಲಿ ಎಸೆಯುತ್ತಿದ್ದ. ಬಳಿಕ ಪೆಡ್ಲರ್ ಅದರ ಫೋಟೊ ತೆಗೆದು ಪೂರೈಕೆದಾರನಿಗೆ ಕಳುಹಿಸುತ್ತಿದ್ದನು. ಅವರು ಅಲ್ಲಿಂದ ಪ್ಯಾಕೆಟ್​​ ಅನ್ನು ತೆಗೆದುಕೊಂಡು ಹೋಗುತ್ತಿದ್ದರು. ಮಂಗಳೂರು ನಗರದಲ್ಲಿ 50ಕ್ಕೂ ಅಧಿಕ ಡ್ರಗ್ಸ್​​ ಪ್ಯಾಕೆಟ್​ಗಳನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.


Share It

You cannot copy content of this page