ರಾಜಕೀಯ ಸುದ್ದಿ

KSRTC ಬಸ್ ವ್ಯವಸ್ಥೆ ಟೀಕಿಸಲು ಬಿಜೆಪಿಗೆ ಯಾವ ನೈತಿಕತೆ ಇದೆ? ಬಿಜೆಪಿ ಟ್ವೀಟ್ ಗೆ ಕಾಂಗ್ರೆಸ್ ಕೌಂಟರ್

Share It

ಟ್ವೀಟ್ ಮಾಡುವುದರಲ್ಲಿ ತಮ್ಮ ಎದೆಗಾರಿಕೆ ತೋರಿಸುವುದನ್ನು ಬಿಟ್ಟು, ಸಾರಿಗೆ ಸಂಸ್ಥೆಗಳಿಗೆ ಕಳೆದ‌ 5 ವರ್ಷದ ತಮ್ಮ ಅಧಿಕಾರಾವಧಿಯಲ್ಲಿ ಯಾವ ಮಹೋನ್ನತ ಸಾಧನೆ ಮಾಡಿದ್ದೀರ ಎಂದು ತಿಳಿಸಿ ಎಂದು ಕಾಂಗ್ರೆಸ್ ಬಿಜೆಪಿ ಕಾಲೆಳೆದಿದೆ

ತಮ್ಮ‌ ಒಂದೊಂದು ಟ್ಟೀಟ್‌ಗೂ ಅಂಕಿ ಅಂಶ ಸಮೇತ ಪ್ರತ್ಯುತ್ತರ ನೀಡಿದಾಗ ತಮ್ಮಿಂದ ಯಾವುದೇ ಪ್ರತಿಕ್ರಿಯೆ ಬರುವುದಿಲ್ಲ ಯಾಕೆ ? ಯಾಕೆಂದರೆ ಸಾರಿಗೆ ಸಂಸ್ಥೆಗಳನ್ನು ಅಧೋಗತಿ ತಂದು ನಿಲ್ಲಿಸಿರುವುದು ತಮ್ಮ ಅಧಿಕಾರಾವಧಿಯಲ್ಲಿ ಎಂಬ ಕಟುವಾದ ಸತ್ಯ ನಿಮಗೆ‌ ತಿಳಿದಿದೆ. ನಮ್ಮ ಸರ್ಕಾರದ‌ ‘ಶಕ್ತಿ ಯೋಜನೆ’ಯಿಂದ ಸಾರಿಗೆ ಸಂಸ್ಥೆಗಳ ಆದಾಯದಲ್ಲಿ‌ ಗಣನೀಯ ವೃದ್ಧಿಯಾದರೂ ಸಾರಿಗೆ ಸಂಸ್ಥೆಗಳಿಗೆ ಶಕ್ತಿ ತುಂಬಲು ಸಾಧ್ಯವಾಗಿಲ್ಲದಿರುವುದು ತಮ್ಮ ಸರ್ಕಾರದ ಕೊಡುಗೆ ಎಂದು ಕುಟುಕಿದೆ.

ಆಡಳಿತದ ಐದು ವರ್ಷಗಳಲ್ಲಿ ಯಡಿಯೂರಪ್ಪ‌ ಹಾಗೂ ಬೊಮ್ಮಾಯಿ ಅವರು ಮುಖ್ಯಮಂತ್ರಿಗಳಾಗಿದ್ದಾಗ ಸಾರಿಗೆ ಸಂಸ್ಥೆಗಳನ್ನು 5900 ಕೋಟಿ ರು. ನಷ್ಟದಲ್ಲಿಟ್ಟು ಹೋಗಿದ್ದಾರೆ. ಕಳೆದ 5 ವರ್ಷಗಳಲ್ಲಿ ಬಿಎಂಟಿಸಿ‌ ಹೊರತುಪಡಿಸಿ ಬೇರೆ ಯಾವುದೇ‌ ಸಾರಿಗೆ ನಿಗಮಗಳಿಗೆ ಬಸ್‌ಗಳ ಸೇರ್ಪಡೆಯೇ ಮಾಡದೆ, ಡಕೋಟ ಬಸ್ಸುಗಳನ್ನು ಕಾರ್ಯಾಚರಣೆ‌ ಮಾಡಲು ಬಿಟ್ಟು ಹೋಗಿದ್ದರು. ನಮ್ಮ ಸರ್ಕಾರ 5800 ಬಸ್ಸುಗಳ ಸೇರ್ಪಡೆಗೆ ಅನುಮೋದನೆ ನೀಡಿದ್ದು, ಕಳೆದೊಂದು ವರ್ಷದಲ್ಲಿಯೇ 3೦00 ಹೊಸ ಬಸ್ಸುಗಳ ಸೇರ್ಪಡೆಯಾಗಿದೆ ಎಂದು ಟ್ವೀಟ್ ಮಾಡಿದೆ.

ಡಕೋಟಾ ಬಸ್ಸುಗಳನ್ನು‌ ಪುನಶ್ಚೇತನ‌ ಮಾಡುವ ಕಾರ್ಯವನ್ನು ಸಹ ಕೈಗೆತ್ತಿಕೊಂಡು 1300 ಬಸ್ಸುಗಳ ಪುನಶ್ಚೇತನ ‌ಕಾರ್ಯ‌ಮಾಡಿದ್ದೇವೆ. ಕಳೆದ‌ ಒಂದು ವರ್ಷದ ಅವಧಿಯಲ್ಲಿಯೇ ತಮ್ಮ ಅವಧಿಯ ಎಲ್ಲಾ ಡಕೋಟಾ ಬಸ್ಸುಗಳನ್ನು ಮಾರ್ಪಡಿಸಲು ಸಾಧ್ಯವೇ?ಸರ್ಕಾರದ ಅಡಳಿತದ 5 ವರ್ಷಗಳಲ್ಲಿ ಸಾರಿಗೆ ಸಂಸ್ಥೆಗಳಲ್ಲಿ 13,888 ಹುದ್ದೆಗಳು ಖಾಲಿ ಇದ್ದರೂ ( ನಿವೃತ್ತಿ ಇನ್ನಿತರೆ ಕಾರಣಗಳಿಂದ ) ಒಂದೇ ಒಂದು‌ ನೇಮಕಾತಿ ಮಾಡಿಲ್ಲ. ನಮ್ಮ ಸರ್ಕಾರ ಬಂದ ಕೂಡಲೇ 9,000 ಹುದ್ದೆಗಳ ನೇಮಕಾತಿಗೆ ಅನುಮೋದನೆ ನೀಡಿದ್ದು, ಈಗಾಗಲೇ 5800 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಗಳು ವಿವಿಧ ಹಂತದಲ್ಲಿವೆ ಎಂದು ಮಾಹಿತಿ ನೀಡಿದೆ.

ಬಿಜೆಪಿ ಅವಧಿಯಲ್ಲಿ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳಿಗೆ ತಿಂಗಳ ವೇತನ ಪೂರ್ಣ ಪಾವತಿಯಾಗದೆ, ಅರ್ಧವೇತನ, ಕೆಲವೊಮ್ಮೆ ಆ ವೇತನವೂ ತಿಂಗಳ ಕೊನೆಯವರೆಗೂ, ಒಮ್ಮೊಮ್ಮೆ ಮುಂದಿನ ತಿಂಗಳವರೆಗೂ ಪಾವತಿಯಾಗುತ್ತಿತ್ತು ಈ ಬಗ್ಗೆ ತಮಗೆ ಮಾಹಿತಿ ಇಲ್ಲವೇ? ನಮ್ಮ ಸರ್ಕಾರ ಬಂದ ಮೇಲೆ ನಿಗದಿತ ದಿನಾಂಕದಂದು ನೌಕರರಿಗೆ ವೇತನ ಪಾವತಿಯಾಗುತ್ತಿದೆ ಎಂದು ತಿಳಿಸಿದೆ.

ಬೆಂಗಳೂರು: ಟ್ಟೀಟ್ ಮಾಡುವುದರಲ್ಲಿ ತಮ್ಮ ಎದೆಗಾರಿಕೆ ತೋರಿಸುವುದನ್ನು ಬಿಟ್ಟು, ಸಾರಿಗೆ ಸಂಸ್ಥೆಗಳಿಗೆ ಕಳೆದ‌ 5 ವರ್ಷದ ತಮ್ಮ ಅಧಿಕಾರಾವಧಿಯಲ್ಲಿ ಯಾವ ಮಹೋನ್ನತ ಸಾಧನೆ ಮಾಡಿದ್ದೀರ ಎಂದು ತಿಳಿಸಿ ಎಂದು ಕಾಂಗ್ರೆಸ್ ಬಿಜೆಪಿ ಕಾಲೆಳೆದಿದೆ.

ತಮ್ಮ‌ ಒಂದೊಂದು ಟ್ಟೀಟ್‌ಗೂ ಅಂಕಿ ಅಂಶ ಸಮೇತ ಪ್ರತ್ಯುತ್ತರ ನೀಡಿದಾಗ ತಮ್ಮಿಂದ ಯಾವುದೇ ಪ್ರತಿಕ್ರಿಯೆ ಬರುವುದಿಲ್ಲ ಯಾಕೆ ? ಯಾಕೆಂದರೆ ಸಾರಿಗೆ ಸಂಸ್ಥೆಗಳನ್ನು ಅಧೋಗತಿ ತಂದು ನಿಲ್ಲಿಸಿರುವುದು ತಮ್ಮ ಅಧಿಕಾರಾವಧಿಯಲ್ಲಿ ಎಂಬ ಕಟುವಾದ ಸತ್ಯ ನಿಮಗೆ‌ ತಿಳಿದಿದೆ. ನಮ್ಮ ಸರ್ಕಾರದ‌ ‘ಶಕ್ತಿ ಯೋಜನೆ’ಯಿಂದ ಸಾರಿಗೆ ಸಂಸ್ಥೆಗಳ ಆದಾಯದಲ್ಲಿ‌ ಗಣನೀಯ ವೃದ್ಧಿಯಾದರೂ ಸಾರಿಗೆ ಸಂಸ್ಥೆಗಳಿಗೆ ಶಕ್ತಿ ತುಂಬಲು ಸಾಧ್ಯವಾಗಿಲ್ಲದಿರುವುದು ತಮ್ಮ ಸರ್ಕಾರದ ಕೊಡುಗೆ ಎಂದು ಕುಟುಕಿದೆ.

ಆಡಳಿತದ ಐದು ವರ್ಷಗಳಲ್ಲಿ ಯಡಿಯೂರಪ್ಪ‌ ಹಾಗೂ ಬೊಮ್ಮಾಯಿ ಅವರು ಮುಖ್ಯಮಂತ್ರಿಗಳಾಗಿದ್ದಾಗ ಸಾರಿಗೆ ಸಂಸ್ಥೆಗಳನ್ನು 5900 ಕೋಟಿ ರು. ನಷ್ಟದಲ್ಲಿಟ್ಟು ಹೋಗಿದ್ದಾರೆ. ಕಳೆದ 5 ವರ್ಷಗಳಲ್ಲಿ ಬಿಎಂಟಿಸಿ‌ ಹೊರತುಪಡಿಸಿ ಬೇರೆ ಯಾವುದೇ‌ ಸಾರಿಗೆ ನಿಗಮಗಳಿಗೆ ಬಸ್‌ಗಳ ಸೇರ್ಪಡೆಯೇ ಮಾಡದೆ, ಡಕೋಟ ಬಸ್ಸುಗಳನ್ನು ಕಾರ್ಯಾಚರಣೆ‌ ಮಾಡಲು ಬಿಟ್ಟು ಹೋಗಿದ್ದರು. ನಮ್ಮ ಸರ್ಕಾರ 5800 ಬಸ್ಸುಗಳ ಸೇರ್ಪಡೆಗೆ ಅನುಮೋದನೆ ನೀಡಿದ್ದು, ಕಳೆದೊಂದು ವರ್ಷದಲ್ಲಿಯೇ 3೦00 ಹೊಸ ಬಸ್ಸುಗಳ ಸೇರ್ಪಡೆಯಾಗಿದೆ ಎಂದು ಟ್ವೀಟ್ ಮಾಡಿದೆ.

ಡಕೋಟಾ ಬಸ್ಸುಗಳನ್ನು‌ ಪುನಶ್ಚೇತನ‌ ಮಾಡುವ ಕಾರ್ಯವನ್ನು ಸಹ ಕೈಗೆತ್ತಿಕೊಂಡು 1300 ಬಸ್ಸುಗಳ ಪುನಶ್ಚೇತನ ‌ಕಾರ್ಯ‌ಮಾಡಿದ್ದೇವೆ. ಕಳೆದ‌ ಒಂದು ವರ್ಷದ ಅವಧಿಯಲ್ಲಿಯೇ ತಮ್ಮ ಅವಧಿಯ ಎಲ್ಲಾ ಡಕೋಟಾ ಬಸ್ಸುಗಳನ್ನು ಮಾರ್ಪಡಿಸಲು ಸಾಧ್ಯವೇ?ಸರ್ಕಾರದ ಅಡಳಿತದ 5 ವರ್ಷಗಳಲ್ಲಿ ಸಾರಿಗೆ ಸಂಸ್ಥೆಗಳಲ್ಲಿ 13,888 ಹುದ್ದೆಗಳು ಖಾಲಿ ಇದ್ದರೂ ( ನಿವೃತ್ತಿ ಇನ್ನಿತರೆ ಕಾರಣಗಳಿಂದ ) ಒಂದೇ ಒಂದು‌ ನೇಮಕಾತಿ ಮಾಡಿಲ್ಲ. ನಮ್ಮ ಸರ್ಕಾರ ಬಂದ ಕೂಡಲೇ 9,000 ಹುದ್ದೆಗಳ ನೇಮಕಾತಿಗೆ ಅನುಮೋದನೆ ನೀಡಿದ್ದು, ಈಗಾಗಲೇ 5800 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಗಳು ವಿವಿಧ ಹಂತದಲ್ಲಿವೆ ಎಂದು ಮಾಹಿತಿ ನೀಡಿದೆ.

ಬಿಜೆಪಿ ಅವಧಿಯಲ್ಲಿ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳಿಗೆ ತಿಂಗಳ ವೇತನ ಪೂರ್ಣ ಪಾವತಿಯಾಗದೆ, ಅರ್ಧವೇತನ, ಕೆಲವೊಮ್ಮೆ ಆ ವೇತನವೂ ತಿಂಗಳ ಕೊನೆಯವರೆಗೂ, ಒಮ್ಮೊಮ್ಮೆ ಮುಂದಿನ ತಿಂಗಳವರೆಗೂ ಪಾವತಿಯಾಗುತ್ತಿತ್ತು ಈ ಬಗ್ಗೆ ತಮಗೆ ಮಾಹಿತಿ ಇಲ್ಲವೇ? ನಮ್ಮ ಸರ್ಕಾರ ಬಂದ ಮೇಲೆ ನಿಗದಿತ ದಿನಾಂಕದಂದು ನೌಕರರಿಗೆ ವೇತನ ಪಾವತಿಯಾಗುತ್ತಿದೆ ಎಂದು ತಿಳಿಸಿದೆ.

Share It

You cannot copy content of this page