ಅಪರಾಧ ಸುದ್ದಿ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಜಾಮೀನು

Share It

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳಿಗೆ ಹೈಕೋರ್ಟ್ ಷರತ್ತುಬ್ಧ ಜಾಮೀನು ನೀಡಿದೆ.

ಹುಕ್ಕೇರಿಯ ಭರತ್​ ಭರತ್ ಜಯವಂತ ಕುರಾನೆ (42), ಶಿಕಾರಿಪುರದ ಸುಜಿತ್ ಕುಮಾರ್ (42), ಮಹಾರಾಷ್ಟ್ರದ ಸತಾರದ ಸುಧನ್ವ ಗೊಂಧಲೇಕರ್ (43) ಮಹಾರಾಷ್ಟ್ರದ ಶ್ರೀಕಾಂತ್ ಪಂಗರ್ಕರ್ (48) ಜಾಮೀನು ಪಡೆದವರು.

ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠ ಜಾಮೀನು ಪುರಸ್ಕರಿಸಿದೆ.
ಆರೋಪಿಗಳು ತಲಾ ಒಂದು ಲಕ್ಷ ರೂಪಾಯಿ ಮೌಲ್ಯದ ವೈಯಕ್ತಿಕ ಬಾಂಡ್​, ಇಬ್ಬರ ಭದ್ರತಾ ಖಾತರಿ ಒದಗಿಸಬೇಕು. ವಿಚಾರಾಧೀನ ನ್ಯಾಯಾಲಯ ವಿನಾಯಿತಿ ನೀಡದ ಹೊರತು ವಿಚಾರಣೆಯ ಎಲ್ಲ ದಿನ ಆರೋಪಿಗಳು ವಿಚಾರಣೆಗೆ ಹಾಜರಾಗಬೇಕು.

ಆರೋಪಿಗಳು ಪ್ರಸಿಕ್ಯೂಷನ್​ ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು. ಇಂಥದ್ದೇ ಆರೋಪದಲ್ಲಿ ಭಾಗಿಯಾಗಬಾರದು ಎಂದು ನ್ಯಾಯಾಲಯ ಷರತ್ತು ವಿಧಿಸಿದೆ. ಆರೋಪಿಗಳು 2018 ರಿಂದ ನ್ಯಾಯಾಂಗ ಬಂಧನದಲ್ಲಿದ್ದರು.


Share It

You cannot copy content of this page