ಶಿಗ್ಗಾವಿ : ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಕೆಲವೇ ದಿನ ಬಾಕಿ ಇದ್ದು
“ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ರವಿ ಕೃಷ್ಣಾರೆಡ್ಡಿ ಅವರಿಂದ ನಾಮ ಪತ್ರ ಸಲ್ಲಿಕೆ ಮಾಡಿದರು.
ಸೋಮವಾರ ಕರ್ನಾಟಕ ರಾಷ್ಟ್ರ ಸಮಿತಿಯ ರವಿ ಕೃಷ್ಣಾರೆಡ್ಡಿ ಅವರು ಒಂದು ನಾಮಪತ್ರ ಸಲ್ಲಿಸಿದ್ದು ಶಿಗ್ಗಾವಿ ತಹಸೀಲ್ದಾರ್ ಕಚೇರಿಯಲ್ಲಿ ಸವಣೂರು ಉಪ ವಿಭಾಗಾಧಿಕಾರಿ ಹಾಗೂ ಚುನಾವಣಾ ಅಧಿಕಾರಿ ಮಹಮದ್ ಖಿಜರ್ ಅವರಿಗೆ ನಾಮಪತ್ರ ಸಲ್ಲಿಸಿದರು.
ನಂತರ ತಮ್ಮ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ರವಿಕೃಷ್ಣ ರೆಡ್ಡಿ ಅವರು ಉತ್ತರ ಕರ್ನಾಟಕದ ಕೇಂದ್ರ ಭಾಗ ಶಿಗ್ಗಾವಿಯಲ್ಲಿ ದೀಪ ಹಚ್ಚಿದರೆ ಇಡೀ ಕರ್ನಾಟಕಕ್ಕೆ ಬೆಳಕು ಬರುತ್ತದೆ ದೀಪ ಹಚ್ಚಲು ಕೆಆರ್ಎಸ್ ಪಕ್ಷವನ್ನು ಬೆಂಬಲಿಸಬೇಕೆಂದು ಮತದಾರರಲ್ಲಿ ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಪಕ್ಷದ ಸಹಸ್ರ ಕಾರ್ಯಕರ್ತರು ಪಾಲ್ಗೊಂಡಿದ್ದರು. ಬಿಜೆಪಿಯಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಹಾಗೂ ಕಾಂಗ್ರೆಸ್ ನಿಂದ ವೈಶಾಲಿ ಕುಲಕರ್ಣಿ ಅಭ್ಯರ್ಥಿಗಳಾಗಿದ್ದಾರೆ.