ರಾಜ್ಯದಲ್ಲಿ ಮುಂದುವರಿದ ಒಣ ಹವೆ
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕೂಡಿಮೆಯಾಗಿದ್ದು, ಚಳಿ ಹೆಚ್ಚಿದೆ, ರಾಜ್ಯದೆಲ್ಲೆಡೆ ಒಣಹವೆ ಮುಂದುವರೆದಿದೆ.
ನವೆಂಬರ್ 21ರ ಸುಮಾರಿಗೆ ದಕ್ಷಿಣ ಅಂಡಮಾನ್ ಸಮುದ್ರದ ಮೇಲ್ಭಾಗದಲ್ಲಿ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ ಇದೆ. ನವೆಂಬರ್ 23ರ ಸುಮಾರಿಗೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಾರವಾರದಲ್ಲಿ 35.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಬೀದರ್ನಲ್ಲಿ 12.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮಂಜುಕವಿದ ವಾತಾವರಣ ನಿರ್ಮಾಣವಾಗಿದೆ,
ಎಚ್ಎಎಲ್ನಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.