ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಮೈಕ್ರೋ ಫೈನಾನ್ಸ್ ಕಿರುಕುಳದ ಹಾವಳಿಯ ತಡೆಗೆ ಸುಗ್ರೀವಾಜ್ಞೆ ತರುವ ಸಂಬಂಧ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಆರಂಭವಾಗಲಿರುವ ಸಭೆಯಲ್ಲಿ ಮೈಕ್ರೋ ಫೈನಾನ್ಸ್ ನಿಯಂತ್ರಣ ಸಂಬಂಧ ಸುಗ್ರೀವಾಜ್ಞೆ ಜಾರಿಗೊಳಿಸುವ ಕುರಿತು ಮಹತ್ವದ ಚರ್ಚೆ ನಡೆಯಲಿದೆ. ಚರ್ಚೆಯ ನಂತರ ಸರಕಾರ ಅಂತಿಮ ತೀರ್ಮಾನ ಹೊರಡಿಸಿದೆ.
ಈಗಾಗಲೇ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಆರೇಳು ಜನರು ಬಲಿಯಾಗಿದ್ದಾರೆ. ಕೆಲವರು ಆತ್ಮಹತ್ಯೆ ಗೆ ಯತ್ನಿಸಿ ಆಸ್ಪತ್ರೆಯಲ್ಲಿದ್ದಾರೆ. ಅನೇಕ ಜನ ಗ್ರಾಮಗಳನ್ನು ತೊರೆದು ಹೋಗಿದ್ದಾರೆ. ರಾಜ್ಯಾದ್ಯಂತ ವಿವಿಧ ಸಂಘಟನೆಗಳಿಂದ ಪ್ರತಿಭಟನೆಗಳು ನಡೆಯುತ್ತಿದೆ.
ಕಿರುಕುಳ ಹೆಚ್ಚಾಗುತ್ತಿರುವ ಪ್ರಕರಣ ದಿನೇದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಸಭೆ ನಡೆಸಿ, ಕದರಮ ತೆಗೆದುಕೊಳ್ಳು ಸೂಚಿಸಲಾಗಿದೆ. ಯಾವುದೇ ದೂರು ಬಂದರೂ ಕ್ರಮ ತೆಗೆದುಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲು ಅವಕಾಶ ನೀಡಲಾಗಿದೆ.
ಇದೆಲ್ಲದರ ನಡುವೆ ಸುಗ್ರೀವಾಜ್ಞೆ ಜಾರಿಗೆ ತರಲು ಸರಕಾರ ತೀರ್ಮಾನಿಸಿದ್ದು, ಬುಧವಾರ ಗೃಹ ಸಚಿವ ಡಾ. ಜಿ. ಪರಮೇಶ್ವರ ಮತ್ತು ಕಾನೂನು ಸಚಿವ ಎಚ್.ಕೆ.ಪಾಟೀಲ್ ನೇತ್ರತ್ವದಲ್ಲಿ ಆರ್ಥಿಕ ಮತ್ತು ಕಾನೂನು ಇಲಾಖೆಯ ಅಧಿಕಾರಗಳ ಸಭೆ ನಡೆದಿದೆ. ಸಭೆಯಲ್ಲಿ ಸುಗ್ರೀವಾಜ್ಞೆ ಜಾರಿಗೆ ಸಂಬಂಧಿಸಿದ ವಿಚಾರಗಳನ್ನು ಅಂತಿಮಗೊಳಿಸಲಾಗಿದೆ.
ಸಚಿವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ತರುವ ವಿಚಾರ ಚರ್ಚೆ ನಡೆಸಿ, ಕಾನೂನಿನ ಸಾಧಕ ಭಾದಕಗಳನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆಯಿದೆ. ಸರಕಾರದ ತೀರ್ಮಾನದಿಂದ ಮೈಕ್ರೋ ಫೈನಾನ್ಸ್ ನಿಂದ ಪೀಡಿತರಾದವರಿಗೆ ಕೊಂಚ ನೆಮ್ಮದಿ ಸಿಗುವ ಸಾಧ್ಯತೆಯಂತೂ ಸಧ್ಯಕ್ಕಿದೆ.