ಉಪಯುಕ್ತ ಸುದ್ದಿ

ಯುಗಾದಿಗೆ ಸಾರಿಗೆ ನಿಗಮಗಳಿಂದ 3300 ಅಧಿಕ ಹೆಚ್ಚುವರಿ ಬಸ್ ವ್ಯವಸ್ಥೆ

Share It

ಬೆಂಗಳೂರು: ಯುಗಾದಿ ಹಬ್ಬದ ಪ್ರಯುಕ್ತ ಮೂರು ಸಾರಿಗೆ ನಿಗಮಗಳಿಂದ ವಿಶೇಷ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ.

ಬೆಂಗಳೂರು ಸೇರಿದಂತೆ ಹಳೇ ಮೈಸೂರು ಭಾಗದಲ್ಲಿ ಕಾರ್ಯನಿರ್ವಹಿಸುವ KSRTC ಯಿಂದ 2000 ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದ್ದು, ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯಿಂದ 450 ಬಸ್ ಹಾಗೂ ಕಲಗಯಾಣ ಕರ್ನಾಟಕ ಸಾರಿಗೆ ಸಂಸ್ಥೆಯಿಂದ 850 ಬಸ್ ಗಳನ್ನು ವ್ಯವಸ್ಥೆ ಮಾಡಲಾಗಿದೆ.

ಬೆಂಗಳೂರಿನ ಮೆಜೆಸ್ಟಿಕ್ ಸೇರಿದಂತೆ ಸ್ಯಾಟಲೈಟ್ ಬಸ್ ನಿಲ್ದಾಣ, ಶಾಂತಿನಗರ ಬಸ್ ನಿಲ್ದಾಣಗಳಿಂದ ಹೆಚ್ಚುವರಿ ಬಸ್ ಗಳ ಕಾರ್ಯಾಚರಣೆ ನಡೆಸಲಿವೆ. ಉಳಿದ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ದಟ್ಟಣೆ ನೋಡಿಕೊಂಡು ಹೆಚ್ಚುವರಿ ಬಸ್ ಗಳನ್ನು ಓಡಿಸುವಂತೆ ಅಧಿಕಾರಿಗಳಿಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಸೂಚನೆ ನೀಡಿದ್ದಾರೆ.


Share It
<p>You cannot copy content of this page</p>