ಅಪರಾಧ ಸುದ್ದಿ

ದಾವಣಗೆರೆಯಲ್ಲಿ 114 ನಿಷೇದಾಜ್ಞೆ ಅಗತ್ಯವಿಲ್ಲ: ಐಜಿಪಿ‌ ರಮೇಶ್ ಬಾನೋತ್

Share It

ದಾವಣಗೆರೆ: ಜಿಲ್ಲೆಯಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಕಲ್ಲುತೂರಾಟದಿಂದಾಗಿ ನಗರದಲ್ಲಿ ಆತಂಕದ ಮನೆಮಾಡಿದ್ದು, ಭಯದ ವಾತಾವರಣ ಸೃಷ್ಟಿಯಾಗಿದೆ.

ಈಗಾಗಲೇ ಪೊಲೀಸರು ಕಿಡಿಗೇಡಿಗಳನ್ನು ಬಂಧಿಸಿದ್ದಾರೆ. ಈ ಪ್ರಕರಣ ಸಂಬಂಧ ಜಿಲ್ಲೆಯ ಪೂರ್ವವಲಯ ಐಜಿಪಿ ರಮೇಶ್ ಬಾನೋತ್ ಮಾತನಾಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿನ್ನೆ (ಸೆ.19)ರಂದು ಸಂಜೆ ಗಣೇಶ ಮೆರವಣಿಗೆ ವೇಳೆ ಕಿಡಿಗೇಡಿಗಳಿಂದ ಕಲ್ಲುತೂರಾಟ ನಡೆದಿದ್ದು, ದಾವಣಗೆರೆ ಎಸ್ಪಿ ತಕ್ಷಣ ಸ್ಥಳಕ್ಕೆ ಧಾವಿಸಿ ಅಗತ್ಯ ಕ್ರಮ ಕೈಗೊಂಡಿದ್ದಾರೆ. ಶಾಂತಿ, ಸೌಹಾರ್ದತೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಪ್ರಕರಣ ಸಂಬಂಧ ಕಿಡಿಗೇಡಿಗಳನ್ನು ಪತ್ತೆಹಚ್ಚಿ 30 ಜನರ ವಶಕ್ಕೆ ಪಡೆಯಲಾಗಿದೆ. ಜೊತೆಗೆ ಮನೆಗಳ ಮೇಲೆ ಕಲ್ಲು ತೂರಾಟ, ಸಾರ್ವಜನಿಕರ ಮೇಲೆ ಕಲ್ಲೆಸೆತ ಸೇರಿ ಒಟ್ಟು 5 ಕೇಸಗಳನ್ನು ದಾಖಲಿಸಲಾಗಿದೆ ಎಂದರು.

ನಗರದಲ್ಲಿ ಇದೀಗ ವಾತಾವರಣ ಸಾಮಾನ್ಯ ಸಹಜ ಸ್ಥಿತಿಗೆ ಮರಳಿದ್ದು, ಗಣೇಶ ವಿಸರ್ಜನೆ ಸಮಯದಲ್ಲಿ ಠಾಣೆಯ 4 ಸಿಬ್ಬಂದಿ ಮಾತ್ರ ಕರ್ತವ್ಯ ನಿರ್ವಹಿಸುತ್ತಿದ್ದರು. ಆ ವೇಳೆ ಇಬ್ಬರು ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿದ್ದು, ಸ್ಥಳೀಯರಲ್ಲಿ ಒಬ್ಬರಿಗೆ ಗಾಯವಾಗಿರುವ ದೂರು ಬಂದಿದ್ದು, ಪ್ರಕರಣ ದಾಖಲಾಗಿದೆ. ಬೇರೆ ಕಡೆಗಳಲ್ಲಿ ಭದ್ರತಾ ದೃಷ್ಟಿಯಿಂದ ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿದ್ದು, ಕಲ್ಲು ತೂರಾಟ ಮಾಡಿದವರ ಪತ್ತೆಗೆ ಕಾರ್ಯಾಚರಣೆ ಚುರುಕು ಮಾಡಲಾಗಿದೆ ಎಂದು ತಿಳಿಸಿದರು.

ನಗರದಲ್ಲಿ ಶಾಂತಿ ಸಭೆ ನಡೆಸಲು ಸಿದ್ಧತೆ ನಡೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾತ್ಮಕ ಆಡಿಯೋ ವೈರಲ್ ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಸದ್ಯಕ್ಕೆ 144 ನಿಷೇಧಾಜ್ಞೆ ಅಗತ್ಯವಿಲ್ಲ. ಈ ಘಟನೆ ಬಳಿಕ ಎಲ್ಲರೂ ಸಹಕರಿಸಿ ಶಾಂತವಾಗಿ ಗಣೇಶ ವಿಸರ್ಜನೆ ಆಗಿದೆ. ಕೆಲ ಕಿಡಿಗೇಡಿಗಳ ಅರೆಸ್ಟ್ ಬಳಿಕ ಅಮಾಯಕರೆಂಬ ಹೇಳಿಕೆ ನೀಡುತ್ತಿದ್ದಾರೆ. ಆದರೆ ಪಕ್ಕ ಮಾಹಿತಿ ಮೇರೆಗೆ ಕಿಡಿಗೇಡಿಗಳನ್ನು ಗುರುತಿಸಿ ವಶಕ್ಕೆ ಪಡೆದಿದ್ದೇವೆ ಎಂದು ಹೇಳಿದರು.

ಬಿಯರ್ ಬಾಟಲಿ ಸಂಗ್ರಹ ವಿಚಾರ:
ಖಾಲಿ ಬೀಯರ್ ಬಾಟಲಿ ಸಂಗ್ರಹಿಸಿದ್ದ ಹತ್ತು ಜನರನ್ನು ಬಂಧಿಸಲಾಗಿದೆ. ತಪ್ಪಿತಸ್ತರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳುಲಾಗುವುದು. ಶಾಂತಿ ಕದಡುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.


Share It

You cannot copy content of this page