ಬೆಂಗಳೂರು: ರಸ್ತೆಯಲ್ಲಿ ಹೋಗುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿರುವ ಘಟನೆ ಬೆಂಗಳೂರಿನ ಮಹದೇವಪುರ ಸಮೀಪ ನಡೆದಿದೆ.
ಮಹದೇವಪುರ ಔಟರ್ ರಿಂಗ್ ರಸ್ತೆಯಲ್ಲಿ ಕಾರಿಗೆ ಏಕಾಏಕಿ ಬೆಂಕಿ ಆವರಿಸಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದವರೆಲ್ಲ ಕೆಳಗಿಳಿದು ಓಡಿ ಬಂದಿದ್ದಾರೆ. ಹೀಗಾಗಿ, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.
ಬೆಂಕಿ ಇಡೀ ಕಾರಿಗೆ ಆವರಿಸಿದ್ದು, ನಂದಿಸುವ ಪ್ರಯತ್ನದಲ್ಲಿ ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ತಾಂತ್ರಿಕ ದೋಷದಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗುತ್ತಿದೆ.
