ಬೆಂಗಳೂರು: ಇಂದು ವೈಕುಂಟ ಏಕಾದಶಿ ವಿಶೇಷ ಆಚರಣೆಯ ನಿಮಿತ್ತ ನಗರದ ವೆಂಕಟೇಶ್ವರ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ವ್ಯವಸ್ಥೆ ಮಾಡಿದ್ದು, ಭಕ್ತರು ದೇವರ ದರ್ಶನ ಪಡೆಯಲು ಸರತಿ ಸಾಲಿನಲ್ಲಿ ಕಾಯುತ್ತಿರುವ ದೃಶ್ಯ ಕಂಡುಬAತು.
ಮಲ್ಲೇಶ್ವರದ ವೈಯ್ಯಾಲಿ ಕಾವಲ್ ನಲ್ಲಿರುವ ಟಿಟಿಡಿ ದೇವಸ್ಥಾನದಲ್ಲಿ ಭಕ್ತರಿಗೆ ವಿಶೇಷ ದರ್ಶನದ ವ್ಯವಸ್ಥೆ ಕಲ್ಪಿಸಲಾಗಿದ್ದು, ಬೆಳಗಿನ ಜಾವ ೩.೩೦ ರಿಂದಲೇ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಾವಿರಾರು ಭಕ್ತರು ಆಗಮಿಸಿದ್ದು, ಸರತಿ ಸಾಲಿನಲ್ಲಿ ನಿಂತು ತಿರುಪತಿ ವೆಂಕಟೇಶ್ವರನ ದರ್ಶನ ಪಡೆದರು.
ಅದೇ ರೀತಿ ನಗರದ ವಿವಿಧ ವೆಂಕಟೇಶ್ವರ ದೇವಸ್ಥಾನಗಳಲ್ಲಿ ಭಕ್ತರಿಗೆ ವೆಂಕಟೇಶ್ವರ ಸ್ವಾಮಿಯ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಉತ್ತರಹಳ್ಳಿಯ ಅನಂತ ಪದ್ಮನಾಭ ದೇವಸ್ಥಾನ, ಇಸ್ಕಾನ್ ಟೆಂಪಲ್, ಲಕ್ಷಿö್ಮÃ ವೆಂಕಟೇಶ್ವರ ದೇವಸ್ಥಾನ ಸೇರಿದಂತೆ ಅನೇಕ ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು.