ಅಪರಾಧ ಸುದ್ದಿ

ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಗೃಹಣಿ

Share It

ತುಮಕೂರು: ಪಾವಗಡದಲ್ಲಿ ಇಬ್ಬರು ಮಕ್ಕಳನ್ನು ಕೊಂದ ತಾಯಿ ತಾನೂ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.

ಪಾವಗಡ ತಾಲೂಕಿನ ಕಡಪನಕೆರೆಯಲ್ಲಿ ಘಟನೆ ನಡೆದಿದ್ದು, 23 ವರ್ಷದ ಸರಿತಾ ಎಂಬಾಕೆ ಆತ್ಮಹತ್ಯೆ ಮಾಡಿಕೊಂಡಾಕೆ. ಆತ್ಮಹತ್ಯೆಗೂ ಮುನ್ನ 4 ವರ್ಷದ ಮಗ ಕೌಶಿಕ್ ಹಾಗೂ 2 ವರ್ಷದ ಮಗು ಯುಕ್ತಿಯನ್ನು ಕೊಲೆ ಮಾಡಿದ್ದಾರೆ.

ಪಾವಗಡ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಶನಿವಾರ ಸಂಜೆ 4 ಗಂಟೆಗೆ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಸರಿತಾ ತನ್ನ ಇಬ್ಬರು ಮಕ್ಕಳ ಹತ್ಯೆಗೈದು, ಬಳಿಕ ತಾನು ನೇಣಿಗೆ ಶರಣಾಗಿದ್ದಾರೆ. ಮೂಲತಃ ಕಡಪನಕೆರೆಯ ಸರಿತಾ ತನ್ನದೇ ಊರಿನ ಸಂತೋಷ್ ಜೊತೆ ಕಳೆದ 6 ವರ್ಷಗಳ ಹಿಂದೆ ಸಂತೋಷ್ ಜೊತೆ ವಿವಾಹವಾಗಿತ್ತು.

ವೃತ್ತಿಯಲ್ಲಿ ಆಟೋ ಚಾಲಕನಾಗಿರುವ ಸಂತೋಷ್ ಈ ಘಟನೆ ನಡೆದ ವೇಳೆ ಮನೆಯಲ್ಲಿರಲಿಲ್ಲ. ಮದುವೆಯಾದಾಗಿನಿಂದ ಪತಿ ಹಾಗೂ ಆತನ ಕುಟುಂಬದಿಂದ ಸರಿತಾ ಅವರಿಗೆ ಕಿರುಕುಳ ನೀಡಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ. ವರದಕ್ಷಿಣೆ ಕಿರುಕುಳ ನೀಡಿದ್ದ ಬಗ್ಗೆ ಶಂಕೆ ವ್ಯಕ್ತವಾಗಿದೆ. ಇದೇ ಕಾರಣಕ್ಕೆ ನೊಂದು ಮಕ್ಕಳ ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.


Share It

You cannot copy content of this page