ಅಪರಾಧ ಸುದ್ದಿ

ಕೆಮ್ಮಣ್ಣುಗುಂಡಿಯಲ್ಲಿ ಪ್ರಪಾತಕ್ಕೆ ಬಿದ್ದು ಶಿಕ್ಷಕ ಸಾವು

Share It

ಚಿಕ್ಕಮಗಳೂರು: ಕೆಮ್ಮಣ್ಣುಗುಂಡಿಯಲ್ಲಿ ಹೆಂಡತಿಯೊAದಿಗೆ ಸೆಲ್ಫಿ ತೆಗೆಯಲು ಹೋಗಿ ನೂರಾರು ಅಡಿ ಆಳದ ಪ್ರಪಾತಕ್ಕೆ ಕಾಲು ಜಾರಿ ಬಿದ್ದು ಗಂಡ ಮೃತಪಟ್ಟಿರುವ ಘಟನೆ ನಡೆದಿದೆ.

ಶಿಕ್ಷಕ ಸಂತೋಷ್(40) ಮತ್ತು ಹೆಂಡತಿ ಶ್ವೇತಾ ಚಿಕ್ಕಮಗಳೂರು ಜಿಲ್ಲೆಯ ಪಶ್ಚಿಮ ಘಟ್ಟಗಳ ಸಾಲಿನಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ಕೆಮ್ಮಣ್ಣುಗುಂಡಿ ನೋಡಲು ಶನಿವಾರ ಬಂದಿದ್ದರು. ಕೆಮ್ಮಣ್ಣುಗುಂಡಿ ಪಾರ್ಕ್ ವೀಕ್ಷಣೆ ಮಾಡಿದ ದಂಪತಿ, ಕೆಮ್ಮಣ್ಣುಗುಂಡಿ ವೀವ್ ಪಾಯಿಂಟ್​ ಬಳಿ ಹೋಗಿದ್ದಾರೆ.

ಪ್ರಕೃತಿ ಸೌಂದರ್ಯದ ನಡುವೆ ಹೆಂಡತಿಯೊಂದಿಗೆ ಸೆಲ್ಫಿ ತೆಗೆಯಲು ಸಂತೋಷ್ ಮುಂದಾಗಿದ್ದರು. ಪ್ರಪಾತದ ತುದಿಯಲ್ಲಿ ನಿಂತಿದ್ದ ಸಂತೋಷ್ ಕಾಲು ಜಾರಿ ನೂರಾರು ಅಡಿ ಆಳಕ್ಕೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ತಲೆಗೆ ಕಲ್ಲು ಬಂಡೆಗಳು ಬಡಿದು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ.

ಮೃತ ಶಿಕ್ಷಕ ಸಂತೋಷ್​ ಮೂಲತಃ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದವರು. ಶ್ವೇತ ಜೊತೆ ಕಳೆದ 5 ವರ್ಷಗಳ ಹಿಂದೆ ವಿವಾಹವಾಗಿದ್ದರು. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿರುವ ಲಕ್ಷ್ಮೀಸಾಗರ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು. ದಸರಾ ರಜೆ ಸಿಕ್ಕ ಹಿನ್ನಲೆ ಕೆಮ್ಮಣ್ಣುಗುಂಡಿಗೆ ಹೆಂಡತಿ ಜತೆ ಪ್ರವಾಸಕ್ಕೆ ಬಂದಿದ್ದರು.

ಈ ವೇಳೆ ಭೀಕರ ದುರಂತ ಸಂಭವಿಸಿದೆ. ಸದ್ಯ ಮೃತ ದೇಹವನ್ನ ಹಗ್ಗದ ಮೂಲಕ ನೂರಾರು ಅಡಿಗಳ ಪ್ರಪಾತದಿಂದ ಅಗ್ನಿಶಾಮಕ ಸಿಬ್ಬಂದಿ ಮೇಲಕ್ಕೆತ್ತಿದ್ದಾರೆ.


Share It

You cannot copy content of this page